nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ ಪ್ರಶ್ನೆ
    ರಾಜ್ಯ ಸುದ್ದಿ November 25, 2023

    ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ ಪ್ರಶ್ನೆ

    By adminNovember 25, 2023No Comments2 Mins Read
    bengaluru

    ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

    ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕಮವನ್ನು ಉದ್ಘಾಟಿಸಿ ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದರು.


    Provided by
    Provided by

    ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಇದು ಕಣ್ಣ ಮುಂದಿದೆ. ಆದರ ದಾಖಲೆ ಕಣ್ಣ ಮುಂದಿದೆ. ಬಿಜೆಪಿಯವರು ನಿರ್ಲಜ್ಜವಾಗಿ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದರು.

    ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ದಾಖಲೆಗಳು ಕಣ್ಣ ಮುಂದಿವೆ. ಆದರೂ ಈ ಬಿಜೆಪಿ ನಾಯಕರು ಯಾಕಿಷ್ಟು ಸುಳ್ಳು ಹೇಳುತ್ತಾರೆ ಎಂದು ಪ್ರಶ್ನಿಸಿದರು.

    ಬಸ್ ಪ್ರಯಾಣಿಕರಲ್ಲಿ ಶೇ.55 ರಷ್ಟು  ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಸೇರಿದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಹೊಟ್ಟೆಕಿಚ್ಚಿನ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.

    1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ. ಇದು ಬಿಜೆಪಿಯವರ ಹೊಟ್ಟಿಕಿಚ್ಚಿಗೆ ಕಾರಣವಾಗಿದೆ ಎಂದು ವಿವರಿಸಿದರು.

    ಜತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ ಎಂದು ಮುಖ್ಯಮಂತ್ರಿಗಳು ವ್ಯಂಗ್ಯವಾಗಿ ಪ್ರಶ್ನಿಸಿದರು.

    ಬಡವರ ಕೈಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ.  ಜನರಿಗೆ ನಾವು ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ , ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದು ವಿವರಿಸಿದರು.

    ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡವರಿಗೆ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದು ಸಿಎಂ ದಿಟ್ಟವಾಗಿ ಮಾತನಾಡಿದರು.

    ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮಾಜಿ ಶಾಸಕಿ ಸೌಮ್ಯ ರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    admin
    • Website

    Related Posts

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.