ಬೆಂಗಳೂರು: ಸದಾ ರಾಜ್ಯ ಸರ್ಕಾರದ ಕೆಲಸವನ್ನು ಕೊಂಕಾಡುವ ಬಿಜೆಪಿ ನೀರಿನ ಸಮಸ್ಯೆ ವಿರುದ್ಧ ನಾಳೆ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಬಿಜೆಪಿಗರಿಗೆ ಮರ್ಯಾದೆ ಇದ್ರೆ ಕೇಂದ್ರದಿಂದ ಪರಿಹಾರ ಕೊಡಿಸಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ಟ್ಯಾಂಕರ್ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿದೆ. ಈ ನೀರಿನ ಸಮಸ್ಯೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿರುವ ಬಿಜೆಪಿ, ನಾಳೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಡಿಸಿಎಂ, ಬಿಜೆಪಿಗರಿಗೆ ಮರ್ಯಾದೆ ಇದ್ರೆ ಮೊದಲು ಕೇಂದ್ರದಿಂದ ಪರಿಹಾರ ಕೊಡಿಸಲಿ. 150 ದಿನದೊಳಗೆ ಮಾಡಬೇಕೆಂಬ ಕಡ್ಡಾಯವಿದೆ. ಆದರೂ ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ. ಅದನ್ನು ಮೊದಲು ಕೊಡಿಸಿ. ಅದನ್ನ ಬಿಟ್ಟು ಈ ಕಪಟ ನಾಟಕ ಆಡೋದು ಬಿಡಿ ಎಂದು ಕಿಡಿಕಾರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


