ಕುಣಿಗಲ್: ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ ಮುಂದಿನ ವರ್ಷದಿಂದ ಸರಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನ ಸಭೆಯಲ್ಲಿ ಮಾತನಾಡಿದ ಅವರು, 2024–25ರಲ್ಲಿ ನಬಾರ್ಡ್ ನಿಂದ ಕಡಿಮೆ ಬಡ್ಡಿ ದರದಲ್ಲಿ 5,600 ಕೋಟಿ ಬರಬೇಕಾಗಿತ್ತು. ಅದರಲ್ಲಿ 3,415 ಕೋಟಿ ರೂ. ಬಂದಿದ್ದು, 2,185 ಕೋಟಿ ರೂ.ಗಳ ಕೊರತೆಯಾಗಿದೆ. ಮಧುಗಿರಿ ತಾಲ್ಲೂಕಿಗೆ ಹೆಚ್ಚು ಅನುದಾನ ನೀಡಿ, ಕುಣಿಗಲ್ ತಾಲ್ಲೂಕಿಗೆ ಅನುದಾನ ಕಡಿಮೆಯಾಗಿರುವ ಬಗ್ಗೆ ಶಾಸಕರು ತಿಳಿಸಿದ್ದಾರೆ.
ಆದರೆ ಮಧುಗಿರಿಯಲ್ಲಿ ಶೇ. 6 ರಷ್ಟು ಎ ಸ್‌ಸಿ ಹಾಗೂ ಎಸ್‌ಟಿ ಸಮುದಾಯದವರಿದ್ದು, ಕುಣಿಗಲ್ ನಲ್ಲಿ ಕೇವಲ ಶೇ.8 ರಷ್ಟು ಮಾತ್ರ ಎಸ್ ಸಿ ಮತ್ತು ಎಸ್ ಟಿ ಗೆ ಸೇರಿದ ಸಮುದಾಯಗಳಿವೆ. ಆದ್ದರಿಂದ ಅನುದಾನದ ಹೆಚ್ಚಿನ ಪಾಲು ಮಧುಗಿರಿಗೆ ನೀಡಿರಬಹುದು. ಆದರೆ ಮುಂದಿನ ವರ್ಷದಿಂದ ಈ ತಾರತಮ್ಯವನ್ನು ಕಾನೂನುಪ್ರಕಾರ ನಿವಾರಣೆ ಮಾಡಲಾಗುವುದು ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


