ಸಂಚಾರ ಪೊಲೀಸರು ನಗರ ಪ್ರದೇಶಗಳಲ್ಲಿ, ರಾಜ್ಯ ಹೆದ್ದಾರಿಗಳಲ್ಲಿ ಸಂಚಾರ ನಿಯಮ ಮೀರಿದ್ರೆ ದಂಡ, ಕಾನೂನು ಕ್ರಮ ಕೈಗೊಳ್ಳುತ್ತಿದ್ದರು. ಆದ್ರೇ ಇದೀಗ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿಗಳಲ್ಲೂ ಖಾಕಿ ಕಣ್ಣಾವಲಿರಿಸಲಾಗಿದೆ.
ರಾಜ್ಯ ರಸ್ತೆ ಮತ್ತು ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು, ರಾಜ್ಯದ ಹೆದ್ದಾರಿಗಳಲ್ಲಿ ಸಂಚಾರ ನಿಯಮ ಪಾಲಿಸದೇ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ರೇ ಚಾಲನಾ ಪರವಾನಗಿ (DL) ರದ್ದಾಗಲಿದೆ ಎಂದು ಹೇಳಿದರು.


