ತುಮಕೂರು: ದೇಶದಲ್ಲಿ ಮತದಾನವನ್ನು ಕಡ್ಡಾಯ ಮಾಡಬೇಕಿದೆ. ಹಾಗಾದರೆ ಮಾತ್ರ ಶೇಕಡ 100ರಷ್ಟು ಮತದಾನ ಪ್ರಮಾಣವಾಗಲಿದೆ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಸಿದ್ದಗಂಗಾ ಮಠದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನದ ಜಾಗೃತಿಯಾಗಿದೆ. ಆದರೆ ಹೆಚ್ಚಿನ ವಿದ್ಯಾವಂತರಾದ ನಗರ ಪ್ರದೇಶದಲ್ಲಿ ಇರುವಂತವರು ಮತದಾನ ಮಾಡಲು ನಿರಾಸಕ್ತಿ ತೋರುತ್ತಿದ್ದಾರೆ. ಇದು ಆಗಬಾರದು ಎಂದು ಹೇಳಿದರು.
ಪ್ರಜಾಪ್ರಭುತ್ವ ಉಳಿಯಬೇಕಾದರೆ ಪ್ರತಿಯೊಬ್ಬರು ಕಡ್ಡಾಯವಾಗಿ ನಿಷ್ಠೆಯಿಂದ ಮತದಾನವನ್ನು ಮಾಡಬೇಕಿದೆ ಎಂದು ಹೇಳಿದರು. ತಮ್ಮ ನಾಯಕನನ್ನು ಆಯ್ಕೆ ಮಾಡಿಕೊಳ್ಳುವಂತಹ ಜನರಿಗೆ ಪ್ರಜಾಪ್ರಭುತ್ವ ನೀಡಿದೆ ಎಂದು ಹೇಳಿದರು.
ರಾಜ್ಯದಲ್ಲಿ ಅತಿ ಹೆಚ್ಚು ಬಾರಿ ಚುನಾವಣೆಯಲ್ಲಿ ಮತದಾನ ಮಾಡಿರುವಂತಹ ಕೀರ್ತಿ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


