ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಇಂಡಿಯಾ ಕೂಟ ಗೆದ್ದರೆ, ಪ್ರತಿ ಮನೆಗೆ ಸರ್ಕಾರಿ ಉದ್ಯೋಗದ ಗ್ಯಾರೆಂಟಿ ನೀಡುವ ಘೋಷಣೆಯನ್ನು ಗೃಹ ಸಚಿವ ಜಿ.ಪರಮೇಶ್ವರ್ ಸಮರ್ಥಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನಗಳಿಗೆ ಏನು ಬೇಕಾಗುತ್ತೆ ಅನ್ನೋದನ್ನ ತಿಳಿದುಕೊಂಡು ಚುನಾವಣೆ ಸಮಯದಲ್ಲಿ ಘೋಷಣೆ ಮಾಡುತ್ತೇವೆ. ಎಲ್ಲರೂ ಮಾಡೋದು ಅದೇ ಕೆಲಸ. ನಮ್ಮ ಮೈತ್ರಿ ಪಕ್ಷದವರು ಪ್ರತಿ ಮನೆಗೆ ಉದ್ಯೋಗ ಕೊಡ್ತೀನಿ ಅಂತ ಘೋಷಣೆ ಮಾಡಿದ್ದಾರೆ. ಉದ್ಯೋಗ ಅನ್ನೋದು ಬಹಳ ಮುಖ್ಯ. ಎಲ್ಲಾ ಕಡೆ ನಿರುದ್ಯೋಗದ ಸಮಸ್ಯೆ ಬಹಳ ಕಾಡ್ತಿದೆ. ಯುವಕರಿಗೆ ಉದ್ಯೋಗ ಸಿಕ್ತಿಲ್ಲ ಅನ್ನೋದು ದೊಡ್ಡ ಪ್ರಶ್ನೆ. ಹಾಗಾಗಿ ಚುನಾವಣೆ ಪ್ರಣಾಳಿಕೆ ಮಾಡಬೇಕು ಅಂತ ಹೇಳಿದ್ದಾರೆ ಎಂದರು.
3 ಕೋಟಿ ಉದ್ಯೋಗ ಸೃಷ್ಟಿ ಸಾಧ್ಯನಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹಂತ ಹಂತವಾಗಿ ಮಾಡ್ತಾರೆ. ಒಂದೇ ದಿನ ಘೋಷಣೆ ಮಾಡಿ, ಒಂದೇ ದಿನ ಕೆಲಸ ಕೊಡೋಕೆ ಆಗುತ್ತಾ? ನಾವು ಕರ್ನಾಟಕದಲ್ಲಿ 2.5 ಲಕ್ಷ ಖಾಲಿ ಇರೋ ಹುದ್ದೆ ಭರ್ತಿ ಮಾಡ್ತೀವಿ ಅಂತ ಪ್ರಣಾಳಿಕೆಯಲ್ಲಿ ಹೇಳಿದ್ವಿ. ನಾವು ಒಂದೇ ಬಾರಿ ಹುದ್ದೆ ಭರ್ತಿ ಮಾಡ್ತೀವಿ ಅಂತ ಅಲ್ಲ. ಈಗ ಪ್ರಾರಂಭ ಮಾಡಿದ್ದೇವೆ. ಒಳ ಮೀಸಲಾತಿ ತೊಂದರೆ ಆಗಿತ್ತು. ಈಗ ಅದೆಲ್ಲ ಬಗೆಹರಿಸಿಕೊಂಡು ನೇಮಕಾತಿ ಪ್ರಾರಂಭ ಮಾಡ್ತಿದ್ದೇವೆ. ಪೊಲೀಸ್ ಇಲಾಖೆ ಸೇರಿ ಬೇರೆ ಇಲಾಖೆಯಲ್ಲಿ ನೇಮಕಾತಿ ನಡೆಯುತ್ತಿದೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC