ರಾಜ್ಯದಲ್ಲಿ ಪರ್ಸೆಂಟೇಜ್ ಸಂಗ್ರಹ ಅವ್ಯಾಹತವಾಗಿ ನಡೆಯುತ್ತಿದೆ. ಸಚಿವರೊಬ್ಬರು ನೇರವಾಗಿ ಗುತ್ತಿಗೆದಾರರಿಂದ ಕಮಿಷನ್ ಡಿಮ್ಯಾಂಡ್ ಮಾಡುತ್ತಿದ್ದಾರೆ. ಇತ್ತೀಚೆಗೆ ಆ ಸಚಿವರನ್ನು ಭೇಟಿಯಾಗಲು ಹೋಗಿದ್ದ ಗುತ್ತಿಗೆದಾರರಿಗೆ, ಹಣ ತಂದಿದ್ದರೆ ಒಳಕ್ಕೆ ಬನ್ನಿ. ಇಲ್ಲವಾದರೆ ಹೊರಗೆ ಇರಿ ಎಂದು ಆ ಸಚಿವರ ಚೇಲಾಗಳು ತಾಕೀತು ಮಾಡಿದ್ದಾರೆ ಎಂದು ಹೆಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಇಂದು ವಿದೇಶದಿಂದ ಆಗಮಿಸಿದ ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ್ದು, ಸಚಿವರ ಚೇಲಾಗಳು ದುಡ್ಡು ಮಾಡಲು ಇಳಿದಿದ್ದಾರೆ. ಇವರು ಈಗ ಹೋಗಿ ದೆಹಲಿಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಅವರಿಗೆ ಹೇಳುತ್ತಾರೆ. ಇಂತಹವರಿಂದ ರಾಜ್ಯದ ಉದ್ಧಾರ ಸಾಧ್ಯವೇ? ಪಾರದರ್ಶಕ ಆಡಳಿತ ನೀಡಲು ಆಗುತ್ತದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


