nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026
    Facebook Twitter Instagram
    ಟ್ರೆಂಡಿಂಗ್
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    ತುಮಕೂರು December 29, 2025

    ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    By adminDecember 29, 2025No Comments2 Mins Read
    shubha kalyan

    ತುಮಕೂರು: ಗೆಲುವು ಹವ್ಯಾಸವಾಗಬೇಕು, ಗೆಲ್ಲುವುದನ್ನೇ ಅಭ್ಯಾಸ ಮಾಡಿಕೊಳ್ಳಬೇಕು. ಆತ್ಮವಿಶ್ವಾಸ, ಛಲ, ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್‌ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬಿದರು.

    ಶನಿವಾರ ತುಮಕೂರು ಗ್ರಾಮಾಂತರ ಕ್ಷೇತ್ರದ ನಾಗವಲ್ಲಿಯ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿಗಳು, ಒಂದು ಕೆಲಸವನ್ನು ಹೇಗೆ ಬೇಕಾದರೂ ಮಾಡಿ ಮುಗಿಸಬಹುದು. ಆದರೆ ಅದನ್ನು ಹೀಗೆ ಮಾಡಿ ಮುಗಿಸಬೇಕು ಎಂದು ತಿಳಿದು ಮುಗಿಸುವುದು ಮುಖ್ಯ. ಅಂತಹ ಚಾಣಾಕ್ಷತನ, ಬುದ್ಧಿವಂತಿಕೆಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಹೇಳಿದರು.


    Provided by
    Provided by

    ಅವಕಾಶಗಳಿಗಾಗಿ ಕಾಯಬಾರದು ಸಿಗುವ ಸಣ್ಣ ಅವಕಾಶವನ್ನೂ ಬಿಡದೆ ಬಳಸಿಕೊಂಡು ಯಶಸ್ವಿಯಾದರೆ ದೊಡ್ಡ ಅವಕಾಶಗಳಿಗೆ ನಾಂದಿಯಾಗುತ್ತದೆ. ಈಗ ನಿಮ್ಮ ಮುಂದಿನ ಗುರಿ ಚೆನ್ನಾಗಿ ಓದಿ ಉತ್ತಮ ಅಂಕ ಪಡೆಯುವುದು. ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ನೂರಕ್ಕೆ ನೂರು ಅಂಕ ಪಡೆಯಬೇಕು. ಅಂತಹ ಫಲಿತಾಂಶ ಪಡೆದರೆ ಶಾಲೆಯಲ್ಲಿ ಮತ್ತೊಂದು ಕಾರ್ಯಕ್ರಮ ಮಾಡೋಣ ಎಂದರು.

    ಈ ವೇಳೆ ಮಾತನಾಡಿದ ಶಾಸಕ ಬಿ.ಸುರೇಶ್ ಗೌಡ, ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳು ಓದಿದ ಈ ನಾಗವಲ್ಲಿ ಶಾಲೆಯನ್ನು ತಾವು ಹತ್ತು ವರ್ಷಗಳ ಹಿಂದೆಯೇ ದತ್ತು ಪಡೆದಿದ್ದು ದೇಶದಲ್ಲೇ ಮಾದರಿ ಶಾಲೆಯನ್ನಾಗಿ ರೂಪಿಸುವ ಸಂಕಲ್ಪ ಮಾಡಿದ್ದೇವೆ. ಈ ಶಾಲೆಗೆ ರಾಜ್ಯ ಸರ್ಕಾರ ನೀಡುವ ಅತ್ಯುತ್ತಮ ಶಾಲೆ ಎಂಬ ಪ್ರತಿಷ್ಠಿತ ಗೋವಿಂದೇಗೌಡ ಶಿಕ್ಷಣ ಪ್ರಶಸ್ತಿ ದೊರಕಿದೆ ಎಂದು ಹೇಳಿದರು.

    1951ರಲ್ಲಿ ಆಗಿನ ಮೈಸೂರು ಮಹಾರಾಜರು ಈ ಶಾಲೆಗೆ ಶಂಕುಸ್ಥಾಪನೆ ನೆರವೇರಿಸಿದರು. ಆಗಿನ ಈ ಭಾಗದ ಶಾಸಕ ಮುಡಲಗಿರಿಯಪ್ಪನವರು ಶಾಲೆಗೆ ಜಮೀನು ನೀಡಿದರು. ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಸದಾನಂದಗೌಡರು, ಸೇರಿದಂತೆ ಉನ್ನತ ಅಧಿಕಾರಿಗಳು ಭೇಟಿ ನೀಡಿ ಶಾಲೆಯ ಚಟುವಟಿಕೆ ಮೆಚ್ಚಿದ್ದಾರೆ. ಮುಂದಿನ ವರ್ಷ ಶಾಲೆಗೆ 75 ವರ್ಷ ತುಂಬುತ್ತದೆ. ದುರಸ್ತಿ ಕಾರ್ಯ ಮುಗಿಸಿ ಎಲ್ಲಾ ಸೌಕರ್ಯಗಳನ್ನು ಒದಗಿಸಿ ನಾಗವಲ್ಲಿ ಶಾಲೆಯನ್ನು ದೇಶದಲ್ಲೇ ಅತ್ಯುತ್ತಮ ಶಾಲೆ ಮಾಡುವ ಆಶಯ ವ್ಯಕ್ತಪಡಿಸಿದರು.

    ಶಾಲೆಯ ಎನ್‌ಸಿಸಿ ಮಕ್ಕಳು ಮಾರ್ಚ್‌ಫಾಸ್ಟ್‌ ಮೂಲಕ ಶಾಸಕರು, ಜಿಲ್ಲಾಧಿಕಾರಿಗಳನ್ನು ಸಮಾರಂಭಕ್ಕೆ ಬರಮಾಡಿಕೊಂಡರು. ಈ ವೇಳೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಶಾಲೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಶೈಕ್ಷಣಿಕ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಡಿಡಿಪಿಐ ರಘುಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ, ಕಾಲೇಜಿನ ಪ್ರಾಚಾರ್ಯ ಸಿದ್ದರಾಜು, ಎಸ್‌ಡಿಎಂಸಿ ಉಪಾಧ್ಯಕ್ಷ ನಾಗಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಗೌರಮ್ಮ, ಉಪಾಧ್ಯಕ್ಷೆ ಜ್ಯೋತಿ, ಡಯಟ್ ಉಪನ್ಯಾಸಕಿ ಶೈಲಾಜಕುಮಾರಿ, ಗ್ರಾ.ಪಂ. ಮಾಜಿ ಅಧ್ಯಕ್ಷೆ ಸುಮಿತ್ರಮ್ಮ, ಸದಸ್ಯರಾದ ರುಕ್ಕಿಣಮ್ಮ, ವೆಂಕಟಲಕ್ಷ್ಮಮ್ಮ, ಹೊಳಕಲ್ ಗ್ರಾ.ಪಂ. ಅಧ್ಯಕ್ಷ ಹೆಚ್.ಎ.ಅಂಜನಪ್ಪ ಅವರೊಂದಿಗೆ ವಿವಿಧ ಮುಖಂಡರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಚಿಕ್ಕನಾಯಕನಹಳ್ಳಿ : ಭವಿಷ್ಯದ ಕನಸನ್ನು ಹೊತ್ತು ವಿದ್ಯಾಬ್ಯಾಸಕ್ಕಾಗಿ ಹಾಸ್ಟೇಲ್‌ ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅದ್ಯಯನಕ್ಕೆ…

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.