ತುಮಕೂರು: ವಿದ್ಯಾರ್ಥಿಗಳ ಏಕಾಗ್ರತೆಯಿಂದ ತಪಸ್ಸಿಗಾಗಿ ತಾವು ಮಾಡುವ ಕೆಲಸದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ಯಶಸ್ವಿಯಾಗಲು ಸಾಧ್ಯ. ತಮ್ಮನ್ನು ಇತರರೊಂದಿಗೆ ಹೋಲಿಕೆ ಮಾಡಿಕೊಳ್ಳಬಾರದು. ಕಲಿತ ವಿಷಯಗಳನ್ನು ಅಂತರ್ಗತ ಮಾಡಿಕೊಳ್ಳಬೇಕು. ಇಲ್ಲವಾದರೆ ಅದು ವ್ಯರ್ಥವಾಗುತ್ತದೆ ಎಂದು ತುಮಕೂರು ಶಿಕ್ಷಣ ಮಹಾವಿದ್ಯಾಲಯದ ಡೀನ್ ಕೆ.ಎಸ್. ಡಾ. ಸಿದ್ಧರಾಜು ಕರೆ ನೀಡಿದರು.
ತುಮಕೂರು ವಿಶ್ವವಿದ್ಯಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ.ಎಸ್.ಇ.ಎಫ್. ಶಿಕ್ಷಣ ಮಹಾವಿದ್ಯಾಲಯ ಶಿರಾ ಗೇಟ್ ಇಲ್ಲಿ ಹಮ್ಮಿಕೊಂಡಿದ್ದ ಅಕ್ಷರಂ ಅನಂತಂನ 2027ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದರು.
ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಸಹ ಪ್ರಾಧ್ಯಾಪಕರಾದ ವಿದ್ಯಾರ್ಥಿಗಳು ಮಾತೃಭಾಷೆಯಲ್ಲಿ ಅನುತ್ತೀರ್ಣರಾಗುತ್ತಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಹಾಗೆಯೇ ಸಮನ್ವಯ ಶಿಕ್ಷಣ ಸಹಿಷ್ಣುತೆ ಶಿಕ್ಷಣ ಮತ್ತು ನೈತಿಕತೆಯ ಕೆಲವು ನಿದರ್ಶನಗಳ ಮೂಲಕ ವಿವರಿಸಿದರು. ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ಸ್ವ ಮೌಲ್ಯ ಮಾಪನ ಮಾಡಿಕೊಳ್ಳಬೇಕು ಎಂದರು.
ಹಿರಿಯ ಉಪನ್ಯಾಸಕರಾದ ಪಿ. ರಾಮಕೃಷ್ಣ ಅವರು ಮಾತನಾಡಿ ವಿದ್ಯೆ ವಿವೇಚನೆ, ಸರಳತೆ ಮತ್ತು ವಿಧೇಯತೆಯನ್ನು ಕಲಿಸಿಕೊಡಬೇಕು. ಪ್ರಸ್ತುತ ಶಿಕ್ಷಣವು ತಂತ್ರಜ್ಞಾನದ ಜೊತೆಗೆ ಮೌಲ್ಯಗಳನ್ನು ಅನುಸರಿಸಬೇಕು. ಅವುಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು. ಶಿಕ್ಷಣವು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ವೈಚಾರಿಕತೆಯಿಂದ ಕೂಡಿರಬೇಕು ಎಂದು ತಿಳಿಸಿದರು.
ಡಾ. ಅರುಣ್ ಎಸ್.ಹೆಚ್. ಅವರು ಮಾತನಾಡಿ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವವನ್ನು ಹೊಂದಿರಬೇಕು. ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್.ಇ.ಎಫ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಹರೀಶ್ ವಹಿಸಿ ಮಾತನಾಡಿ ಶಿಕ್ಷಣವು ಉನ್ನತ ಮಟ್ಟದಲ್ಲಿರಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಡಾ. ಕುಮಾರಸ್ವಾಮಿ ಕಾಲೇಜಿನ ಇತಿಹಾಸ ಹಾಗೂ ಬಿ.ಇಡಿ ಎರಡು ವರ್ಷದ ಪಠ್ಯಕ್ರಮ ಹಾಗೂ ಇನ್ನಿತರ ಚಟುವಟಿಕೆಗಳನ್ನು ಪ್ರಶಿಕ್ಷಣಾರ್ಥಿಗಳು ಹೇಗೆ ಅಳವಡಿಸಿಕೊಳ್ಳಬೇಕೆಂಬುದರ ಬಗ್ಗೆ ವಿವರಿಸಿದರು.
ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ಮನೋಹರ ಸ್ವಾಗತಿಸಿದರೆ, ಯಶಸ್ವಿನಿ ಹಾಗೂ ವಿಷ್ಣು ಕಾರ್ಯಕ್ರಮ ನಿರೂಪಿಸಿದರು. ಹುಲಿಗಪ್ಪ ವಂದಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


