nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಲಿನ ಜೊತೆಗೆ ಅರಿಶಿಣ ಬೆರೆಸಿ ಕುಡಿದ್ರೆ ಈ ಕಾಯಿಲೆಗಳೆಲ್ಲಾ ಮಾಯ
    ಆರೋಗ್ಯ June 13, 2024

    ಹಾಲಿನ ಜೊತೆಗೆ ಅರಿಶಿಣ ಬೆರೆಸಿ ಕುಡಿದ್ರೆ ಈ ಕಾಯಿಲೆಗಳೆಲ್ಲಾ ಮಾಯ

    By adminJune 13, 2024No Comments2 Mins Read
    milk 2

    ಹಾಲಿಗೆ ಅರಿಶಿನ ಸೇರಿಸಿ ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ.

    ರಕ್ತವನ್ನು ಶುದ್ಧೀಕರಿಸುತ್ತದೆ: ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಎಲ್ಲಾ ಕಲ್ಮಶಗಳಿಂದ ರಕ್ತನಾಳಗಳು ಮತ್ತು ದುಗ್ಧರಸ ವ್ಯವಸ್ಥೆ(ಲಿಂಫ್ಯಾಟಿಕ್ ಸಿಸ್ಟಮ್)ಯನ್ನು ಶುದ್ಧಗೊಳಿಸುತ್ತದೆ.

    ಕ್ಯಾನ್ಸರ್ ತಡೆಗಟ್ಟುತ್ತದೆ: ಅರಿಶಿನ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಬಹುದು. ಅರಿಶಿನದಲ್ಲಿರುವ ‘ಕರ್ಕ್ಯುಮಿನ್ ‘ ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ.

    ಜೀರ್ಣಕ್ರಿಯೆ ಹೆಚ್ಚಿಸುತ್ತದೆ: ಅರಿಶಿನದ ಹಾಲು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹೊಟ್ಟೆಯ ಹುಣ್ಣು ಮತ್ತು ಅತಿಸಾರವನ್ನು ತಡೆಯುತ್ತದೆ. ಹೊಟ್ಟೆಯುಬ್ಬರ, ಎದೆಯುರಿ, ಇತರ ಜಠರಗರುಳಿನ ಸೋಂಕುಗಳಿದ್ದರೆ ಪ್ರತಿದಿನ ಅರಿಶಿನವನ್ನು ಒಂದು ಕಪ್ ಹಾಲಿಗೆ ಸೇರಿಸಿ ಕುಡಿಯಿರಿ.

    ಸಮಯಕ್ಕೆ ಸರಿಯಾಗಿ ಋತುಚಕ್ರ: ಅರಿಶಿನದ ಹಾಲು ಕುಡಿಯುತ್ತಿದ್ದರೆ ಮುಟ್ಟಿನ ನೋವು ಶಮನಗೊಂಡು, ಋತುಚಕ್ರ ಸಮಯಕ್ಕೆ ಸರಿಯಾಗಿ ಆಗುತ್ತದೆ. ಜೊತೆಗೆ, ಲ್ಯುಕೋರಿಯಾ, ಎಂಡೊಮೆಟ್ರಿಯೊಸಿಸ್, ಫೈಬ್ರಾಯ್ಡ್ಸ್ ಮತ್ತು ಹಾರ್ಮೋನುಗಳಲ್ಲಿ ಅಸಮತೋಲನ ಹೊಂದಿರುವ ಮಹಿಳೆಯರಿಗೂ ಅರಿಶಿನ ಹಾಲು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.

    ಕೆಮ್ಮು ಮತ್ತು ಶೀತಕ್ಕೆ ಪರಿಹಾರ: ಅರಿಶಿನ ಹಾಲು ಆಂಟಿವೈರಲ್ ಮತ್ತು ಆಂಟಿಬ್ಯಾಕ್ಟೀರಿಯಾ ಗುಣಗಳನ್ನು ಹೊಂದಿರುವುದರಿಂದ ಕೆಮ್ಮು ಮತ್ತು ಶೀತವನ್ನು ಹೋಗಲಾಡಿಸುತ್ತದೆ. ಗಂಟಲು ನೋಯುತ್ತಿದ್ದರೆ ಅರಿಶಿನ ಹಾಲನ್ನು ಕುಡಿಯಿರಿ.

    ಉಸಿರಾಟದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ: ಅರಿಶಿನದ ಹಾಲು ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಅಸ್ತಮಾ, ಬ್ರಾಂಕೈಟಿಸ್‌ಗೆ ಪರಿಣಾಮಕಾರಿ ಪರಿಹಾರವಾಗಿದೆ. ಸೈನಸ್ ಮತ್ತು ಶ್ವಾಸಕೋಶದ ಸಮಸ್ಯೆಯಿದ್ದರೂ ಪರಿಹಾರ ನೀಡುತ್ತದೆ.

    ತೂಕ ಕಡಿಮೆಯಾಗುತ್ತದೆ: ಹೌದು, ಅರಿಶಿನ ಹಾಲು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ! ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

    ಸರಿಯಾಗಿ ನಿದ್ರೆ ಬರಲು: ನಿದ್ರೆ ಸರಿಯಾಗಿ ಬರದಿದ್ದರೆ ಅರಿಶಿನ ಹಾಲು ಕುಡಿಯಿರಿ. ಮಲಗುವ ಮೊದಲು ಅರಿಶಿನ ಹಾಲು ಕುಡಿದರೆ ವಿಶ್ರಾಂತಿ ಸಿಗುತ್ತದೆ. ಮನಸ್ಸು ಶಾಂತಗೊಂಡು ನಿದ್ರೆ ಬರುತ್ತದೆ.

    ಕೀಲು ನೋವು ನಿವಾರಣೆ: ಅರಿಶಿನವನ್ನು ಆಯುರ್ವೇದದಲ್ಲಿ ‘ನೈಸರ್ಗಿಕ ಆಸ್ಪಿರಿನ್’ಎಂದು ಕರೆಯುತ್ತಾರೆ. ಇದು ಎಲ್ಲಾ ರೀತಿಯ ನೋವನ್ನು ನಿವಾರಿಸುತ್ತದೆ. ಅರಿಶಿನ ಹಾಲಿನಲ್ಲಿ ಕ್ಯಾಲ್ಸಿಯಂ ಇರುವುದರಿಂದ ಕೀಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮೂಳೆಗಳನ್ನು ಆರೋಗ್ಯವಾಗಿರಿಸುತ್ತದೆ. ಈ ಹಾಲನ್ನು ಪ್ರತಿದಿನ ಸೇವಿಸುವುದರಿಂದ ಭವಿಷ್ಯದಲ್ಲಿ ಆಸ್ಟಿಯೊಪೊರೋಸಿಸ್ ಮತ್ತು ಸಂಧಿವಾತ ಬರುವುದನ್ನು ತಪ್ಪಿಸಬಹುದು.

    ಚರ್ಮಕ್ಕೆ ಹೊಳಪು ನೀಡುತ್ತದೆ: ಅರಿಶಿನದ ಹಾಲು ಮೊಡವೆ, ಎಸ್ಜಿಮಾ, ಇತರ ಚರ್ಮದ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಚರ್ಮದಲ್ಲಿ ಮೂಡಿರುವ ಸುಕ್ಕುಗಳನ್ನು ತೆಗೆದು, ನೈಸರ್ಗಿಕವಾಗಿ ಹೊಳೆಯಲು ಸಹಾಯ ಮಾಡುತ್ತದೆ.

    ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ: ಅರಿಶಿನ ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ ಎಂದು ಅಧ್ಯಯನಗಳು ಹೇಳಿವೆ. ಅರಿಶಿನದಲ್ಲಿನ ಕರ್ಕ್ಯುಮಿನ್ ಸೈಟೊಕಿನ್ ಗಳ ಬಿಡುಗಡೆ ತಡೆಯುತ್ತದೆ. ಈ ಸೈಟೊಕಿನ್‌ ಗಳು ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗೆ ಸಂಬಂಧಿಸಿವೆ.

    ಮಧುಮೇಹ ಚಿಕಿತ್ಸೆಗೆ: ಅರಿಶಿನದಲ್ಲಿರುವ ಕರ್ಕ್ಯುಮಿನ್ ಅಂಶ ರಕ್ತದಲ್ಲಿರುವ ಗ್ಲೂಕೋಸ್ ಮಟ್ಟ ಕಡಿಮೆ ಮಾಡುತ್ತದೆ. ಇದು ಮಧುಮೇಹ ಚಿಕಿತ್ಸೆಗೆ ಸಹಾಯ ಮಾಡುತ್ತದೆ. ಡಯಾಬಿಟಿಕ್ ನೆಫ್ರೋಪತಿ, ಡಯಾಬಿಟಿಕ್ ರೆಟಿನೋಪತಿ ಚಿಕಿತ್ಸೆಯಲ್ಲಿ ಕರ್ಕ್ಯುಮಿನ್ ಬಳಸಲಾಗುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು

    July 11, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.