ಕೊಪ್ಪಳ: ‘ನಿಮಗೆ ಗ್ಯಾರಂಟಿ ಯೋಜನೆಯ ಅಕ್ಕಿ ಬ್ಯಾಡ ಅಂದರೆ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡೋಣ. ನಿಂಗೆ ಉತ್ತಮ ರಸ್ತೆಗಳು ಬೇಕು ಅಂದರೆ ಅಕ್ಕಿ ಸೇರಿದಂತೆ ಎಲ್ಲವೂ ನಿಲ್ಲುತ್ತವೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿದ್ದಾರೆ.
ಕೊಪ್ಪಳದ ಕುಕನೂರು ತಾಲೂಕಿನ ರ್ಯಾವಣಿಕದಲ್ಲಿ ಪ್ರೌಢಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.
ನಮ್ಮ ಹೊಲಕ್ಕೆ ಹೋಗುವ ರಸ್ತೆ ಮಾಡಿಕೊಡಿ ಎಂಬ ಮನವಿಯೊಂದಕ್ಕೆ ಬಸವರಾಜ ರಾಯರೆಡ್ಡಿ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಇದೀಗ ಬಸವರಾಜ ರಾಯರೆಡ್ಡಿ ಅವರ ಮಾತುಗಳು ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬೀಳಲು ದಾರಿ ಮಾಡಿಕೊಟ್ಟಿದೆ.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ತಂದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಅಲ್ಲದೆ ಹಲವು ಬಾರಿ ಹಲವು ಶಾಸಕರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತುಗಳನ್ನು ಆಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC