ಪಟ್ನಾ: ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿದ್ದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಸ್ಪಷ್ಟಪಡಿಸಿದರು.
ಸ್ವಾತಂತ್ರ್ಯ ಹೋರಾಟಗಾರ ವೀರ್ ಕುನ್ವರ್ ಸಿಂಗ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆರ್ ಜೆಡಿ ಮುಖಂಡರಾದ ರಾಬ್ಡಿದೇವಿ ಅವರ ನಿವಾಸದಲ್ಲಿ ಶುಕ್ರವಾರ ನಡೆದ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿದ್ದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ಆಹ್ವಾನ ಬಂದಿತ್ತು, ನಾನು ಹಾಜರಾಗಿದ್ದೆ ಎಂದು ಅವರು ಹೇಳಿದ್ದಾರೆ.
ನಾವು ಕೂಡ ಇಫ್ತಾರ್ ಕೂಟಗಳನ್ನು ಆಯೋಜಿಸುತ್ತೇವೆ ಮತ್ತು ಎಲ್ಲರನ್ನೂ ಆಹ್ವಾನಿಸುತ್ತೇವೆ ಎಂದು ಅವರು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5