ತುಮಕೂರು: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 473 ಕಳವು ಪ್ರಕರಣಗಳನ್ನು ಪತ್ತೆ ಹಚ್ಚಿ 9.5 ಕೋಟಿ ಮೌಲ್ಯದ ಕಳವು ಮಾಲುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಇಂದು ವಾರಸುದಾರರಿಗೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಅವರು ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮ ಅಧಿಕಾರಿಗಳು ಕೆಲಸ ಮಾಡುತ್ತಿರುವುದರಿಂದ ಹಲವು ಪ್ರಕರಣಗಳನ್ನು ಯಶಸ್ವಿಯಾಗಿ ಪತ್ತೆ ಹಚ್ಚಿ, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಎಸ್ಪಿ ರಾಹುಲ್ ಅವರ ನೇತೃತ್ವದಲ್ಲಿ ಉತ್ತಮ ಬಾಂಧವ್ಯವನ್ನು ಅಕಾರಿ, ಸಿಬ್ಬಂದಿಗಳು ಹೊಂದಿದ್ದಾರೆ ಎಂದರು.
ಕಳ್ಳತನ ಎಷ್ಟೇ ನಡೆದರೂ, ಆ ಪ್ರಕರಣವನ್ನು ಪತ್ತೆ ಹಚ್ಚಲು ಪೊಲೀಸರು ಸಮರ್ಥರಿದ್ದಾರೆ. ಅದಕ್ಕಾಗಿ ಈ ರೀತಿ ಸ್ವತ್ತು ಪ್ರದರ್ಶನ ಮಾಡುವ ಮೂಲಕ ಜನರಲ್ಲಿ ವಿಶ್ವಾಸ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಕೋವಿಡ್, ಲಾಕ್ಡೌನ್ ನಂತಹ ಸಂದರ್ಭದಲ್ಲಿ ಗುಜರಾತ್, ಮಧ್ಯಪ್ರದೇಶ, ತಮಿಳುನಾಡು, ಆಂಧ್ರಪ್ರದೇಶದ ಕೆಲವೆಡೆ ಕ್ಯಾಂಪ್ ಮಾಡಿ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಲು ಶ್ರಮಿಸಿದ್ದಾರೆ. ಪೊಲೀಸ್ ಸಿಬ್ಬಂದಿಗಳ ಇಚ್ಛಾಶಕ್ತಿಯಿಂದ ಅಪರಾಧಗಳ ಪತ್ತೆಗೆ ಕಾರಣವಾಗಿದೆ ಎಂದರು.
ಜಿಲ್ಲೆಯಲ್ಲಿ ಇದ್ದ ಸರಗಳ್ಳತನ ಪ್ರಕರಣವನ್ನು ಪೊಲೀಸರ ಚಾಣಾಕ್ಷತೆಯಿಂದ ಸೆರೆ ಹಿಡಿಯಲಾಗಿದೆ, ತರಬೇತಿಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಟಿ.ಮೂರ್ತಿ, ಪಿ.ಮೂರ್ತಿ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಅವರ ಶ್ರಮದಿಂದ ದೊಡ್ಡ ಸರಗಳ್ಳತನ ಮಾಡುವ ಗ್ಯಾಂಗ್ ಬಂಧಿಸಲಾಗಿದೆ ಎಂದು ಹೇಳಿದರು.
ಎಸ್ಪಿ ರಾಹುಲ್ ಕುಮಾರ್ ಶಹಪೂರವಾಡ್ ಮಾತನಾಡಿ , ಕೋವಿಡ್ ಸಂದರ್ಭದಲ್ಲಿ ಪೊಲೀಸರ ಕಠಿಣ ಶ್ರಮದಿಂದ ಕಳವು ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಲಾಕ್ಡೌನ್ ಸಮಯದಲ್ಲಿಯೂ ಪೊಲೀಸ್ ಸಿಬ್ಬಂದಿ ಕಾರ್ಯನಿರ್ವಹಿಸಿ ಕಳವು ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಪ್ರಶಂಸಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700