ತುಮಕೂರು : ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳದ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ತುಮಕೂರು ತಾಲೂಕಿನ ಲಿಂಗಾಪುರ ಬಳಿ ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಹಿಂದೂಪುರ ಸಂಘಟನೆಗಳ ಸದಸ್ಯರು ದಾಳಿ ನಡೆಸಿದ್ದರು.
ವಾಹನವನ್ನು ತಡೆದು ಪರಿಶೀಲಿಸಿದಾಗ ರಕ್ಷಣೆ ಗೋವುಗಳು ಇರುವುದನ್ನು ಕಂಡು ತಕ್ಷಣ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ನಂತರ ಪೊಲೀಸರು ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4