ಮಂಗಳೂರು: ಅಕ್ರಮವಾಗಿ ಗೋವುಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲದ ಬೆಳ್ಳಿಚಡವು ಬಳಿ ನಡೆದಿದೆ.
ಹಾಸನದಿಂದ ಕೇರಳದತ್ತ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪುತ್ತೂರು ಪೊಲೀಸರು ತಡೆಹಿಡಿಯಲು ಯತ್ನಿಸಿದ್ದಾರೆ. ಆದ್ರೆ, ಲಾರಿ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದಾರೆ. ಅಲ್ಲದೇ ಲಾರಿ ಚಾಲಕ ನೇರವಾಗಿ ಪೊಲೀಸರ ಮೇಲೆ ಹತ್ತಿಸಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಪುತ್ತೂರು ಗ್ರಾಮೀಣ ಠಾಣೆಯ ಪಿಎಸ್ ಐ ಜಂಬುರಾಜ್ ಮಹಾಜನ್ ಅವರು ಗುಂಡು ಹಾರಿಸಿದ್ದು, ಆರೋಪಿಯಾದ ಅಬ್ದುಲ್ಲಾ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡ ಅಬ್ದುಲ್ಲಾನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆರೋಪಿಯ ಸ್ಥಿತಿ ಸ್ಥಿರವಾಗಿದೆ. ಲಾರಿಯಲ್ಲಿ ಇದ್ದ ಮತ್ತೊಬ್ಬ ಆರೋಪಿ ಘಟನೆಯ ನಂತರ ಪರಾರಿಯಾಗಿದ್ದಾನೆ. ಪೊಲೀಸರು ಅವನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC