nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ

    July 9, 2026
    Facebook Twitter Instagram
    ಟ್ರೆಂಡಿಂಗ್
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    • ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
    • ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
    • ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
    • 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
    • ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
    • ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ರಮ ಗುರುತು ಚೀಟಿ ಸೃಷ್ಟಿ: ಸಮಗ್ರ ತನಿಖೆಗೆ ಬಿಜೆಪಿ ಮನವಿ
    ರಾಜ್ಯ ಸುದ್ದಿ October 26, 2023

    ಅಕ್ರಮ ಗುರುತು ಚೀಟಿ ಸೃಷ್ಟಿ: ಸಮಗ್ರ ತನಿಖೆಗೆ ಬಿಜೆಪಿ ಮನವಿ

    By adminOctober 26, 2023No Comments2 Mins Read
    bjp

    ಬೆಂಗಳೂರು: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಮಗ್ರ ತನಿಖೆಗೆ ಶಿಫಾರಸು ಮಾಡುವಂತೆ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಕೋರಿದೆ. ಈ ಸಂಬಂಧ ಬಿಜೆಪಿ ನಿಯೋಗವು ಇಂದು ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

    ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್ ‍ನಲ್ಲಿ ಮತದಾರರ ನಕಲಿ ಗುರುತುಚೀಟಿ ಸಿದ್ಧಪಡಿಸಿ ನೀಡಲಾಗುತ್ತಿತ್ತು. ಇದು ರಾಷ್ಟ್ರೀಯ ಭದ್ರತೆ ಸಂಬಂಧಿಸಿ ಆತಂಕಕಾರಿ ವಿಚಾರ ಎಂದು ಮನವಿ ತಿಳಿಸಿದೆ.

    ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, ಎನ್ ‍ಐಎ ಅಥವಾ ಸಿಬಿಐಗೆ ಇದನ್ನು ಒಪ್ಪಿಸಲು ಶಿಫಾರಸು ಮಾಡುವಂತೆ ಮನವಿ ಮಾಡಲಾಯಿತು.

    ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್ ‍ಐಆರ್ ಪ್ರಕಾರ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸ್ ಇನ್‍ಸ್ಪೆಕ್ಟರ್ ಅವರು ಇದೇ 19ರಂದು ಆರ್‍ಟಿ ನಗರದ ಸುಲ್ತಾನ ಪಾಳ್ಯ ಬನಶಂಕರಿ ಕಾಂಪ್ಲೆಕ್ಸ್‍ ನ ಎಂಎಸ್ ‍ಎಲ್ ಟೆಕ್ನೊ ಸೊಲ್ಯೂಶನ್ಸ್‍ ನಲ್ಲಿ ಗುರುತಿನ ಚೀಟಿಗಳನ್ನು ಸಿದ್ಧಪಡಿಸಲಾಗುತ್ತಿತ್ತು ಎಂದು ತಿಳಿಸಿದ್ದಾರೆ. ಇವರು ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಾನ್ ಕಾರ್ಡ್ ಮತ್ತಿತರ ದಾಖಲಾತಿಗಳನ್ನು ತಮ್ಮ ಅಂಗಡಿಯ ಕಂಪ್ಯೂಟರ್ ‍ನಲ್ಲಿ ಸುಳ್ಳು ಸೃಷ್ಟಿ ಮಾಡಿ ತಮ್ಮ ಸ್ವಂತ ಲಾಭಕ್ಕಾಗಿ ಸಾರ್ವಜನಿಕರಿಗೆ, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾದವರಿಗೆ ಸಹಕರಿಸುತ್ತಿದ್ದರು. ನಿಜವಾದ ಗುರುತಿನ ಚೀಟಿಗಳೆಂದು ಹೆಚ್ಚಿನ ಹಣಕ್ಕೆ ನೀಡಿ ಸರಕಾರ ಮತ್ತು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದರು. ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್ ಮಾಲೀಕ ಮೌನೇಶ್ ಕುಮಾರ್ ಹಾಗೂ ಈತನ ಕೃತ್ಯಕ್ಕೆ ಸಹಕರಿಸಿದ ಭಗತ್, ರಾಘವೇಂದ್ರ ವಿರುದ್ಧ ಎಫ್‍ಐಆರ್ ದಾಖಲಾಗಿದೆ ಎಂದು ಮನವಿ ವಿವರಿಸಿದೆ.

    ನಕಲಿ ಮತದಾರರ ಗುರುತು ಚೀಟಿ ಸಿದ್ಧಪಡಿಸುವುದು ಕೂಡ ರಾಷ್ಟ್ರೀಯ ಅಪರಾಧ. ರಾಷ್ಟ್ರೀಯ ಭದ್ರತೆಯ ವಿರುದ್ಧ ನಡೆದ ಕುಕೃತ್ಯ ಇದಾಗಿದೆ ಎಂದು ಗಮನ ಸೆಳೆಯಲಾಯಿತು. ರಾಜ್ಯದ ಮಾಜಿ ಸಚಿವ ಎಸ್.ಸುರೇಶ್ ಕುಮಾರ್, ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಮುಖಂಡ ಭಾಸ್ಕರ ರಾವ್, ವಕೀಲರ ಸಂಘದ ಅಧ್ಯಕ್ಷ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ ಮತ್ತು ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ಯೋಗೇಂದ್ರ ಹೂಡಘಟ್ಟ, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಮುಖಂಡರಾದ ಕಟ್ಟಾ ಜಗದೀಶ್ ಅವರ ನಿಯೋಗವು ಈ ಮನವಿ ಸಲ್ಲಿಸಿತು.


    Provided by
    Provided by
    admin
    • Website

    Related Posts

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ಕೆಲವೊಮ್ಮೆ ತೀವ್ರವಾದ ಮಸಾಜ್ ಮಾಡಿಸಿಕೊಳ್ಳುವಾಗ, ಮೈತುಂಬಾ ಹಚ್ಚೆ (Tattoos) ಹಾಕಿಸಿಕೊಳ್ಳುವಾಗ ಅಥವಾ ಕಠಿಣವಾದ ಕ್ರೀಡೆಗಳಲ್ಲಿ ತೊಡಗಿಕೊಂಡಾಗ ಉಂಟಾಗುವ ನೋವಿನಲ್ಲಿ ಕೆಲವರು…

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ

    July 9, 2026

    ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ

    July 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.