ಬೀದರ್: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಕಮಲನಗರ ಪೊಲೀಸ್ ಠಾಣಾ ಪೊಲೀಸರು, ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 18 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಮಾರ್ಗದರ್ಶನದಂತೆ ಕಮಲನಗರ ಪೊಲೀಸ್ ಠಾಣಾ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಕರ್ನಾಟಕ–ಮಹಾರಾಷ್ಟ್ರ ಗಡಿಯ ಹತ್ತಿರ ವಾಹನದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪಿ.ಎಸ್.ಐ ಚಂದ್ರಶೇಖರ, ತಮ್ಮ ಸಿಬ್ಬಂದಿ ರವರೊಂದಿಗೆ ಶಿವಾನಂದ, ಆಹಾರ ನಿರೀಕ್ಷಕರು, ತಹಸಿಲ್ ಕಛೇರಿ ಕಮಲನಗರ ರವರ ಸಮಕ್ಷಮ ದಾಳಿ ನಡೆಸಿದರು.
61,200 ಮೌಲ್ಯದ ಅಕ್ಕಿ ಹಾಗೂ 5,00,000 ರೂ. ಮೌಲ್ಯದ ವಾಹನವನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಕಾನೂನು ರೀತಿಯ ಕ್ರಮಕೈಗೊಂಡಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC