ಹಾವೇರಿ: ಪಡಿತರ ಅಕ್ಕಿಯನ್ನು ಲಾರಿಯಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಸಂದರ್ಭ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಟೋಲ್ ಹತ್ತಿರ ಆಹಾರ ನಿರೀಕ್ಷಕರು ಮತ್ತು ಪೊಲೀಸರು ಶುಕ್ರವಾರ ದಾಳಿ ನಡೆಸಿ, 238 ಕ್ವಿಂಟಾಲ್ ಅಕ್ಕಿ ಹಾಗೂ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಶುಕ್ರವಾರ ಮಧ್ಯಾಹ್ನ 12:30ರ ವೇಳೆಯಲ್ಲಿ ಹುಬ್ಬಳ್ಳಿಯಿಂದ ರಾಷ್ಟ್ರೀಯ ಹೆದ್ದಾರಿ –48ರ ಮೂಲಕ ಬೆಂಗಳೂರು ಕಡೆ ಅಕ್ಕಿಯನ್ನು ಸಾಗಿಸುತ್ತಿದ್ದ ಸಂದರ್ಭ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 8.11 ರೂ. ಲಕ್ಷ ಮೌಲ್ಯದ 478 ಅಕ್ಕಿ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ.
ಡಿ.ಸಿ.ಆರ್.ಬಿಯ ಪಿಎಸ್ ಐ ಕೃಷ್ಣಪ್ಪ ತೋಪಿನ ಮತ್ತು ಸಿಬ್ಬಂದಿಗಳಾದ ಜಿ.ಬಿ.ಕಾಳೆ, ಪ್ರಕಾಶ ದೇವಗಿರಿ, ಬೀರಪ್ಪ ಲಮಾಣಿ ಹಾಗೂ ಶಿಗ್ಗಾವಿ ಆಹಾರ ನಿರೀಕ್ಷಕರನ್ನು ಒಳಗೊಂಡ ತಂಡವು ಜಂಟಿ ಕಾರ್ಯಾಚರಣೆ ನಡೆಸಿ ಲಾರಿ ಚಾಲಕನನ್ನು ಬಂಧಿಸಿದೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಸಾಗಣೆ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


