ತುಮಕೂರು: ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಇಂಗ್ಲಿಷ್ ವಿಭಾಗವು ಪ್ರಸಿದ್ಧ ನಾಟಕಕಾರ ವಿಲಿಯಂ ಶೇಕ್ಸ್’ಫಿಯರ್ ಅವರ ಹ್ಯಾಮ್ಲೆಟ್ ಹಾಗೂ ಜೂಲಿಯಸ್ ಸೀಸರ್ ನಾಟಕಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಂಡಿತ್ತು.
ಶಿರಾ ಸರ್ಕಾರಿ ಪ್ರಥಮ ದರ್ಜೆಕಾಲೇಜಿನ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕ ಪ್ರಭಾಸ್ ಪಂಡಿತ್‌ಟಿ.ಎಸ್. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಹ್ಯಾಮ್ಲೆಟ್ ನಾಟಕವನ್ನು ಮಹಾಭಾರತ ಮತ್ತು ರಾಮಾಯಣಗಳ ಸನ್ನಿವೇಶಗಳಿಗೆ ಹೋಲಿಕೆ ಮಾಡುವ ಮೂಲಕ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಶೇಠ್ ಪ್ರಕಾಶ್ ಎಂ., ನಮ್ಮಆಲೋಚನೆಯನ್ನು ನಾಟಕಗಳು ಮತ್ತಷ್ಟು ಸುಧಾರಿಸುತ್ತವೆ, ಕಲ್ಪನಾ ಶಕ್ತಿಯನ್ನು ಹೆಚ್ಚಿಸುವುದರಜೊತೆಗೆ ಹೊಸ ರೀತಿಯ ಆಲೋಚನೆಗಳಿಗೆ ಕಾರಣವಾಗುತ್ತವೆ. ಹ್ಯಾಮ್ಲೆಟ್ ನಾಟಕವು ಬಿಎಸ್ಸಿ ಮೂರನೆಯ ಸೆಮಿಸ್ಟರ್ ನ ಭಾಗವಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯೂ ಸಂದರ್ಭದ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಡಾ.ಜ್ಯೋತಿ ಮತ್ತಿತರರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx