nammatumakuru

    Subscribe to Updates

    Get the latest creative news from FooBar about art, design and business.

    What's Hot

    80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!

    September 12, 2026

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026
    Facebook Twitter Instagram
    ಟ್ರೆಂಡಿಂಗ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    • ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ
    • ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ
    • ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ
    •  “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
    • ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    ಜಿಲ್ಲಾ ಸುದ್ದಿ July 27, 2026

    ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ

    By Ganesh TumkuruJuly 27, 2026No Comments1 Min Read
    gowtam p methre

    ಔರಾದ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿರುವ ಅಕ್ರಮ ಸಾರಾಯಿ ಮಾರಾಟವನ್ನು ತಕ್ಷಣವೇ ಬಂದ್ ಮಾಡಬೇಕು ಮತ್ತು ಇದರಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಭೀಮ ಆರ್ಮಿ ಭಾರತ ಏಕತಾ ಮಿಷನ್ ತಾಲೂಕು ಅಧ್ಯಕ್ಷ ಗೌತಮ್ ಪಿ. ಮೇತ್ರೆ ಒತ್ತಾಯಿಸಿದ್ದಾರೆ.

    ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗ್ರಾಮೀಣ ಭಾಗಗಳಲ್ಲಿ ಅಕ್ರಮ ಸಾರಾಯಿ ಹಾವಳಿ ಮಿತಿಮೀರಿದ್ದು, ಸಾರ್ವಜನಿಕ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

    ಅಕ್ರಮ ಮದ್ಯದ ಹಾವಳಿಯಿಂದಾಗಿ ಹದಿಹರೆಯದ ಯುವಕರು ಮದ್ಯವ್ಯಸನಕ್ಕೆ ತಳ್ಳಲ್ಪಡುತ್ತಿದ್ದು, ಅಮೂಲ್ಯ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ.  ಸಾಮಾಜಿಕ ಹಾಗೂ ಆರ್ಥಿಕ ಸಂಕಷ್ಟ: ಅಕ್ರಮ ಮದ್ಯ ಮಾರಾಟದಿಂದ ಗ್ರಾಮಗಳಲ್ಲಿ ಶಾಂತಿ-ಸುವ್ಯವಸ್ಥೆ ಹದಗೆಡುತ್ತಿದೆ. ಬಡ ಕುಟುಂಬಗಳು ಸಾಲದ ಸುಳಿಗೆ ಸಿಲುಕಿ ಆರ್ಥಿಕವಾಗಿ ನಲುಗುತ್ತಿದ್ದು, ಕೆಲ ಕುಟುಂಬಗಳು ಜೀವನೋಪಾಯಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

    “ಮಕ್ಕಳನ್ನು ಕಳೆದುಕೊಂಡ ಪೋಷಕರ ನೋವನ್ನು ಕೇಳುವವರೇ ಇಲ್ಲದಂತಾಗಿದೆ. ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.”

    — ಗೌತಮ್ ಪಿ. ಮೇತ್ರೆ, ತಾಲೂಕು ಅಧ್ಯಕ್ಷರು, ಭೀಮ ಆರ್ಮಿ.

    ಅಕ್ರಮ ಸಾರಾಯಿಗೆ ಸಂಪೂರ್ಣ ತಡೆ ನೀಡಿ ಗ್ರಾಮಗಳನ್ನು ಮದ್ಯಮುಕ್ತಗೊಳಿಸಲು ಪೊಲೀಸ್ ಹಾಗೂ ಅಬಕಾರಿ ಇಲಾಖೆಗಳು ಜಂಟಿಯಾಗಿ ವಿಶೇಷ ಕಾರ್ಯಾಚರಣೆ ನಡೆಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ

    September 11, 2026

    ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು

    September 11, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!

    September 12, 2026

    ಬೆಂಗಳೂರು:  ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ’80ರ ದಶಕದ ಟ್ರೆಂಡ್’ (1980s AI Photo Trend) ಜೋರಾಗಿಯೇ ಸದ್ದು ಮಾಡುತ್ತಿದೆ. ರಾಜಕಾರಣಿಗಳು,…

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.