ಬೆಂಗಳೂರು: ಕರ್ನಾಟಕದಲ್ಲಿ ಈ ಬಾರಿ ಸರಿಯಾಗಿ ಮಳೆಯಾಗದೆ ಹಾಗೂ ಜಲಾಶಯಗಳಲ್ಲಿ ನೀರಿನ ಪ್ರಮಾಣ ತಗ್ಗಿರುವ ಕಾರಣ ಭತ್ತದ ಬೆಳೆ ಉತ್ಪಾದನೆ ಗಣನೀಯವಾಗಿ ಕುಸಿದಿದೆ. ಇದರ ನೇರ ಪರಿಣಾಮವಾಗಿ ರಾಜ್ಯದಲ್ಲಿ ಅಕ್ಕಿ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ.
ಕಳೆದ ಮೂರು ತಿಂಗಳಲ್ಲಿ ಮೂರನೇ ಬಾರಿಗೆ ಅಕ್ಕಿ ಬೆಲೆಯಲ್ಲಿ ಏರಿಕೆಯಾಗಿದ್ದು, ಪ್ರಸ್ತುತ ಕೆಜಿಯೊಂದಕ್ಕೆ ಸಾಮಾನ್ಯ ಅಕ್ಕಿಯ ಮೇಲೆ 5 ರಿಂದ 10 ರೂ. ಹಾಗೂ ಕ್ವಾಲಿಟಿ ಅಕ್ಕಿಯ ಮೇ 10 ರಿಂದ 20 ರೂ. ವರೆಗೆ ಹೆಚ್ಚಳವಾಗಿದೆ. ಒಟ್ಟಾರೆಯಾಗಿ ಒಂದು ಕ್ವಿಂಟಾಲ್ ಅಕ್ಕಿಯ ಬೆಲೆಯಲ್ಲಿ ಸುಮಾರು 1,000 ರೂಪಾಯಿಯವರೆಗೆ ಏರಿಕೆಯಾಗಿದೆ. ಹೋಲ್ಸೇಲ್ ಮಾರುಕಟ್ಟೆಯಲ್ಲಿ ಚೀಲವೊಂದರ ಮೇಲೆ 200 ರಿಂದ 300 ರೂ.ವರೆಗೆ ಬೆಲೆ ಹೆಚ್ಚಾಗಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಇದರ ಬಿಸಿ ಗ್ರಾಹಕರಿಗೆ ತಟ್ಟುತ್ತಿದೆ.
ಮಳೆ ಕೊರತೆಯಿಂದ ಕಚ್ಚಾ ವಸ್ತುಗಳ ಲಭ್ಯತೆ ಕಡಿಮೆಯಾಗಿರುವುದು ಮತ್ತು ಹೊರರಾಜ್ಯ ಹಾಗೂ ವಿದೇಶಗಳಿಗೆ ಅಕ್ಕಿ ಪೂರೈಕೆ ಹೆಚ್ಚಾಗಿರುವುದು ರಾಜ್ಯದಲ್ಲಿ ಅಕ್ಕಿ ಕೊರತೆಗೆ ಪ್ರಮುಖ ಕಾರಣವೆಂದು ವ್ಯಾಪಾರಿಗಳು ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಅಕ್ಟೋಬರ್ ವೇಳೆಗೆ ಅಕ್ಕಿ ಬೆಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
