nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ
    • 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಲಿ ರಕ್ಷಣೆಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತನ್ನಿ: ಬಿ.ವೈ.ವಿಜಯೇಂದ್ರ ಒತ್ತಾಯ
    ರಾಜ್ಯ ಸುದ್ದಿ June 27, 2025

    ಹುಲಿ ರಕ್ಷಣೆಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತನ್ನಿ: ಬಿ.ವೈ.ವಿಜಯೇಂದ್ರ ಒತ್ತಾಯ

    By adminJune 27, 2025No Comments2 Mins Read
    b y vijayendra

    ಬೆಂಗಳೂರು: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ಅರಣ್ಯ ವಲಯದಲ್ಲಿ ಹುಲಿ ಮತ್ತು ಅದರ ನಾಲ್ಕು ಮರಿಗಳು ಸಾವಿಗೀಡಾಗಿದ್ದು, ತನಿಖಾ ತಂಡ ಆದಷ್ಟು ಬೇಗ ಸತ್ಯವನ್ನು ಬಹಿರಂಗಪಡಿಸಬೇಕು ಮತ್ತು ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಒತ್ತಾಯಿಸಿದ್ದಾರೆ.

    ಮಲೆ ಮಹದೇಶ್ವರರ ವಾಹನವೆಂದು ಹುಲಿಯನ್ನು ಪೂಜಿಸುವ ಬೆಟ್ಟದ ಸನ್ನಿಧಿಯಲ್ಲೇ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ಸಾವನ್ನಪ್ಪಿರುವ ಸುದ್ದಿ ಅತ್ಯಂತ ಆಘಾತಕಾರಿ, ಅಮಾನವೀಯ ಹಾಗೂ ಭಕ್ತರ ಮನಸ್ಸಿಗೆ ಘಾಸಿ ತರಿಸಿರುವ ಘಟನೆಯಾಗಿದೆ. ಹುಲಿಗಳ ಸಾವಿಗೆ ವಿಷ ಪ್ರಾಶನವಾಗಿದ್ದರೆ ಅದು ಅತ್ಯಂತ ಹೇಯ ಹಾಗೂ ಖಂಡನೀಯ. ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ರಚಿಸಿರುವ ತನಿಖಾ ತಂಡ ಶೀಘ್ರ ಸತ್ಯಾಂಶವನ್ನು ಬಯಲಿಗೆಳೆದು ದುಷ್ಕರ್ಮಿಗಳನ್ನು ಬಂಧಿಸಲಿ ಎಂದು ಒತ್ತಾಯಿಸುವೆ’ ಎಂದು ಅವರು ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಹುಲಿಗಳು ಸಾವಿಗೀಡಾದ ಸ್ಥಳದ ಬಳಿಯೇ ಹಸುವಿನ ಮೃತದೇಹ ಪತ್ತೆಯಾಗಿದ್ದು, ಹುಲಿ ಮತ್ತು ಅದರ ನಾಲ್ಕು ಮರಿಗಳ ಸಾವಿಗೆ ವಿಷಪ್ರಾಶನ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹುಲಿ ಬೇಟೆಯಾಡಿದ ನಂತರ ಹಸುವಿನ ಕಳೇಬರಕ್ಕೆ ವಿಷ ಹಾಕಲಾಯಿತೇ ಅಥವಾ ವಿಷಪ್ರಾಶನವಾದ ಹಸುವನ್ನು ಕಾಡಿನೊಳಗೆ ಇರಿಸಲಾಗಿತ್ತೇ ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ. ಹುಲಿಗಳ ಹಾಗೂ ಹಸುವಿನ ಅಂಗಾಂಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಹುಲಿಗಳ ದೇಹ ಸೇರಿರುವ ವಿಷ ಯಾವುದು, ಪ್ರಮಾಣ ಎಷ್ಟು ಎಂಬ ಮಾಹಿತಿ ವರದಿ ಬಂದ ಬಳಿಕತಿಳಿಯಲಿದೆ ಎಂದು ಅರಣ್ಯಾಧಿಕಾರಿ ತಿಳಿಸಿದ್ದಾರೆ.

    ‘ಮನು ಕುಲದ ಅಸ್ತಿತ್ವ ವನ್ಯಜೀವಿ ಪ್ರಾಣಿಗಳ ಸಂರಕ್ಷಣೆಯಲ್ಲಿದೆ’ ಎಂಬ ಅರಿವು ಇನ್ನಷ್ಟು ವ್ಯಾಪಿಸಬೇಕಿದೆ. ಕಾಡಂಚಿನಲ್ಲಿ ವಾಸಿಸುವ ಜನರಲ್ಲಿ ಅರಣ್ಯ ಹಾಗೂ ವನ್ಯ ಜೀವಿಗಳ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕಿದೆ. ಪ್ರತಿಯೊಂದು ವನ್ಯಜೀವಿಯೂ ಮನುಷ್ಯ ಸಮಾಜದ ಸ್ನೇಹಜೀವಿ ಹಾಗೂ ದೇಶದ ಸಂಪತ್ತು ಎಂಬ ನಿಟ್ಟಿನಲ್ಲಿ ವ್ಯಾಪಕ ಪ್ರಚಾರಾಂದೋಲನವನ್ನು ಸರ್ಕಾರ ಆರಂಭಿಸಲಿ’ ಎಂದಿದ್ದಾರೆ.

    ‘ಹುಲಿ ಸಂತತಿ ಕರ್ನಾಟಕ ರಾಜ್ಯದ ಅರಣ್ಯ ಪ್ರದೇಶದ ಹೆಮ್ಮೆಯ ಹೆಗ್ಗುರುತಾಗಿದೆ. ಹುಲಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಈ ನಿಟ್ಟಿನಲ್ಲಿ ಸರ್ಕಾರ ಹುಲಿ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರದ ಯೋಜನೆಯನ್ನು ಬಳಸಿಕೊಂಡು ವಿಶೇಷ ಆದ್ಯತೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅಲ್ಲದೇ ಹುಲಿಗಳ ಸಂರಕ್ಷಣೆ ಹಾಗೂ ಸುರಕ್ಷತೆಯತ್ತ ವಿಶೇಷ ಕಾಳಜಿ ವಹಿಸಬೇಕು ಎಂದು ಆಗ್ರಹಿಸುತ್ತೇನೆ’ ಎಂದು ತಿಳಿಸಿದ್ದಾರೆ.

    ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ಬಿಡುಗಡೆ ಮಾಡಿದ ವರದಿ ಪ್ರಕಾರ, ಕರ್ನಾಟಕವು ದೇಶದಲ್ಲಿ ಎರಡನೇ ಅತಿ ಹೆಚ್ಚು ಹುಲಿ ಜನಸಂಖ್ಯೆಯನ್ನು ಹೊಂದಿದೆ. 563 ಹುಲಿಗಳು ಇಲ್ಲಿವೆ. ಮಧ್ಯಪ್ರದೇಶ 785 ಹುಲಿಗಳನ್ನು ಹೊಂದಿದ್ದು, ಮೊದಲನೇ ಸ್ಥಾನದಲ್ಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW


    Provided by
    Provided by
    admin
    • Website

    Related Posts

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಮಹಿಳೆಯರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ

    July 14, 2026

    ಕುಣಿಗಲ್: ಸರ್ಕಾರದ ಯೋಜನೆ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇದರಲ್ಲಿ ಮಧ್ಯವರ್ತಿಗಳಿಗೆ ಅವಕಾಶವಿಲ್ಲ. ಮಹಿಳೆಯರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ…

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.