ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಕುರಿತು ಗುಡ್ ನ್ಯೂಸ್ ಹೊರಬಿದ್ದಿದ್ದು, 7ನೇ ವೇತನ ಆಯೋಗ ಜಾರಿಗೆ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಲು ಒಲವು ತೋರಿದ್ದಾರೆ ಎನ್ನಲಾಗಿದೆ.
ಲೋಕಸಭಾ ಚುನಾವಣಾ ನೀತಿ ಸಂಹಿತೆ ಮುಗಿಯುತ್ತಿದ್ದಂತೆ, ಸಿಎಂ ಸಿದ್ಧರಾಮಯ್ಯ 7ನೇ ವೇತನ ಆಯೋಗ ಜಾರಿಗೆ ಒಲವು ತೋರಿದ್ದಾರೆ ಎನ್ನಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಕೆಗೆ ಕ್ಷಣಗಣನೆ ಶುರುವಾಗಿದೆ.
ಒಟ್ಟಿನಲ್ಲಿ ಸತತ ಹೋರಾಟ, ಪ್ರತಿಭಟನೆ ಹಾಗೂ ವರ್ಷಗಳ ಕಾಯುವಿಕೆಯಿಂದ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆ ಸಂಬಂಧದ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಇಷ್ಟೇ ಅಲ್ಲದೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಹಣಕಾಸು) ಎಲ್ ಕೆ ಅತೀಕ್ ಮಾತನಾಡಿ “ಸರ್ಕಾರದ ಎಲ್ಲಾ ಆದೇಶಗಳನ್ನು ಸಿದ್ಧಪಡಿಸುವಂತೆ ನಾವು ತಿಳಿಸಿದ್ದೇವೆ. ಜೂನ್ 15 ರ ಮೊದಲು ಎಲ್ಲಾ ಆದೇಶಗಳನ್ನು ಹೊರಡಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296