ಕಳೆದ 6 ತಿಂಗಳ ಅವಧಿಯಲ್ಲಿ ನಾಡಿನ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿ ಮತ್ತು ಸಮಾಜದ ಶಾಂತಿ-ಸಾಮರಸ್ಯದ ರಕ್ಷಣೆ ನಮ್ಮ ಸರ್ಕಾರದ ಪ್ರಮುಖ ಉದ್ದೇಶ ಎಂದರು.
ಸಾಧಿಸಿದ್ದು ಹಲವು, ಸಾಗಬೇಕಾದ ಹಾದಿ ಬಹುದೂರ ಇದೆ. ಕರ್ನಾಟಕ ಅಭಿವೃದ್ಧಿ ಮಾದರಿಯ ಈ ಪಯಣದಲ್ಲಿ ಜೊತೆಯಾಗಿ ಸಾಗೋಣ ಎಂದರು.