ಬೆಂಗಳೂರು: ಚುನಾವಣಾ ಪೂರ್ವದಲ್ಲಿ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ಗ್ಯಾರೆಂಟಿ ( ಭರವಸೆ ) ಗಳನ್ನು ತನ್ನ ಅಧಿಕಾರ ( ವಾರಂಟಿ ) ಅವಧಿ ಪ್ರಾರಂಭವಾಗುವ ಮುನ್ನವೇ ಜಾರಿಗೆ ತರುವಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನಡೆದ ಮೊದಲ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಿ ತನ್ನ ಸಹೋದ್ಯೋಗಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದ ನಂತರ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಸಚಿವ ಸಂಪುಟದ ತೀರ್ಮಾನಗಳನ್ನು ಬಹಿರಂಗಪಡಿಸಿದರು.
ಗೃಹ ಜ್ಯೋತಿ ಯೋಜನೆ :
ಈ ಯೋಜನೆಯಡಿ ಗೃಹ ಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್
ಗೃಹ ಲಕ್ಷ್ಮೀ ಯೋಜನೆ:
ಈ ಯೋಜನೆಯಡಿ ಮನೆಯೊಡತಿಗೆ ಪ್ರತಿ ಮಾಹೆ 2000 ರೂ. ಈ ಯೋಜನೆಗೆ 1200 ಕೋಟಿ ರೂ ವೆಚ್ಚವಾಗುತ್ತದೆ.
ಅನ್ನಭಾಗ್ಯ ಯೋಜನೆ:
ಬಡತನ ರೇಖೆಗಿಂತಲೂ ಕೆಳಗಿರುವ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಪ್ರತಿ ಸದಸ್ಯರಿಗೆ ಹತ್ತು ಕೆ ಜಿ ಅಕ್ಕಿ
ಯುವ ನಿಧಿ ನಿರುದ್ಯೋಗ ಭತ್ಯೆ ಯೋಜನೆ:
ಪದವಿ, ಸ್ನಾತಕೋತ್ತರ ಪದವಿ, ಪಿ ಹೆಚ್ ಡಿ ಪಡೆದವರಿಗೆ ಮೊದಲ ಎರಡು ವರ್ಷಗಳು ಅಥವಾ ಸರ್ಕಾರಿ ಅಥವಾ ಖಾಸಗಿ ಉದ್ಯೋಗ ದೊರೆಯುವವರೆಗೆ ಮಾಸಿಕ 3000 ರೂ ಭತ್ಯೆ, ಡಿಪ್ಲೋಮಾ ಹೊಹಾಜರಿದ್ದರಿಗೆ ಮಾಸಿಕ 1500 ರೂ ಭತ್ಯೆ.
ಮಹಿಳೆಯರಿಗೆ ಉಚಿತ ಬಸ್ ಪಾಸ್:
ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಸಂಚಾರಕ್ಕೆ ಅವಕಾಶ.
ಈ ಎಲ್ಲಾ ಯೋಜನೆಗಳ ಅನುಷ್ಠಾನಕ್ಕೆ , ರಾಜ್ಯ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ. ಅಲ್ಲದೆ, ಸರ್ಕಾರಿ ಆದೇಶಗಳನ್ನು ಹೊರಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


