ರಾಷ್ಟ್ರದ ಮಹಾನಗರಗಳ ಪೈಕಿ, ಬೆಂಗಳೂರು ನಗರವು ‘ಸೇಫ್ ಸಿಟಿ’ (ಸುರಕ್ಷತಾ ನಗರ) ಯೋಜನೆ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿದೆ. ಸದ್ಯದಲ್ಲೇ ಈ ಯೋಜನೆ ಅನುಷ್ಠಾನ ಪೂರ್ಣಗೊಳಿಸಿದ ಮೊದಲ ನಗರ ಎನ್ನುವ ಹೆಗ್ಗಳಿಕೆಗೂ ಪಾತ್ರವಾಗಲಿದೆ’ ಎಂದು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಹೇಳಿದರು.
ನಗರದಲ್ಲಿ ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು. ‘ಸೇಫ್ ಸಿಟಿ ಯೋಜನೆ’ ಅಡಿ ಇದುವರೆಗೂ 4, 500 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಮೂರು ಸಾವಿರ ಕ್ಯಾಮೆರಾ ಅಳವಡಿಕೆ ಬಾಕಿ ಇದೆ. ಕೃತಕ ಬುದ್ಧಿಮತ್ತೆ ಕ್ಯಾಮೆರಾ ವ್ಯವಸ್ಥೆ ನೆರವಿನಿಂದ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳ ಫೋಟೊ ತೆಗೆದು ದಂಡ ವಿಧಿಸಲಾಗುತ್ತಿದೆ. ಇನ್ನೂ ಕೆಲವು ಸ್ಥಳಗಳಲ್ಲಿ ಕೃತಕ ಬುದ್ಧಿಮತ್ತೆ ಕ್ಯಾಮೆರಾ ಅಳವಡಿಕೆ ಕೆಲಸಗಳು ಬಾಕಿಯಿದೆ. ಅದನ್ನು ಪೂರ್ಣಗೊಳಿಸಿದರೆ ಬೆಂಗಳೂರು ಈ ಯೋಜನೆ ಅನುಷ್ಠಾನದಲ್ಲಿ ಮೊದಲ ಸ್ಥಾನಕ್ಕೇರಲಿದೆ. ಇತರೆ ಮಹಾನಗರಗಳಲ್ಲಿ ಯೋಜನೆ ಇನ್ನೂ ಟೆಂಡರ್ ಹಂತದಲ್ಲಿವೆ’ ಎಂದು ಹೇಳಿದರು.
‘ಸಮಾಜಘಾತುಕ ಕೃತ್ಯಗಳನ್ನು ಹತ್ತಿಕ್ಕಲು ಬೆಂಗಳೂರು ಪೊಲೀಸರು ಸಮರ್ಥರಿದ್ದಾರೆ. ಉತ್ತಮ ಬೆಂಗಳೂರು ನಿರ್ಮಾಣದತ್ತ ಪೊಲೀಸ್ ಇಲಾಖೆ ಹಲವು ಕ್ರಮ ಕೈಗೊಂಡಿದೆ. ನಗರ ಸುರಕ್ಷಿತವಾಗಿದ್ದರೆ ಮಾತ್ರ ಕೈಗಾರಿಕೆಗಳನ್ನು ಸೆಳೆಯಲು ಸಾಧ್ಯ’ ಎಂದು ಹೇಳಿದರು.
ವರದಿ : ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 81233 82149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


