ನವದೆಹಲಿ: ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿ ಸಂಬಂಧ ಅಧಿಸೂಚನೆ ಪ್ರಕಟಿಸಿದ ಹಿನ್ನೆಲೆಯಲ್ಲಿ ದೆಹಲಿಯ ಹಲವು ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಮುಖ್ಯವಾಗಿ ಈಶಾನ್ಯ ದೆಹಲಿಯ ಶಾಹೀನ್ ಬಾಗ್, ಜಾಮಿಯಾ ನಗರ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿ ಗಸ್ತು ತಿರುಗಾಟ ನಡೆಸುತ್ತಿದ್ದಾರೆ.ಈ ಕುರಿತು ಪ್ರಚೋದನಕಾರಿ ಪೋಸ್ಟ್‌ಗಳು ಹಾಗೂ ವದಂತಿಗಳನ್ನು ತಡೆಯಲು ದೆಹಲಿಯ ಸೈಬರ್ ಪೊಲೀಸರು ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇಟ್ಟಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆಗೆ (ಸಿಎಎ) ಸಂಸತ್ತು 2019ರ ಡಿಸೆಂಬರ್ 11ರಂದು ಅಂಗೀಕಾರ ನೀಡಿತ್ತು. ರಾಷ್ಟ್ರಪತಿಯವರು ಮಾರನೆಯ ದಿನವೇ ಅದಕ್ಕೆ ಅಂಕಿತ ಹಾಕಿದ್ದರು. ಇದು ದೇಶದಾದ್ಯಂತ ಪ್ರತಿಭಟನೆಗಳಿಗೆ ಕಾರಣವಾಗಿತ್ತು. ಜಾಮಿಯಾ ನಗರ ಮತ್ತು ಶಾಹೀನ್ ಬಾಗ್ ಪ್ರತಿಭಟನೆಯ ಕೇಂದ್ರಬಿಂದುವಾಗಿದ್ದವು.
2020ರ ಆರಂಭದಲ್ಲಿ ದೆಹಲಿಯ ಈಶಾನ್ಯ ಭಾಗವು ಕೋಮು ಗಲಭೆಗಳಿಗೆ ಸಾಕ್ಷಿಯಾಗಿತ್ತು. ಇದರಲ್ಲಿ 53 ಜನರು ಮೃತಪಟ್ಟಿದ್ದು500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ದೆಹಲಿಯ ಸೀಲಂಪುರ್, ಜಾಫ್ರಾಬಾದ್, ಮುಸ್ತಫಾಬಾದ್, ಭಜನ್ಪುರ, ಖಜೂರಿ ಖಾಸ್ ಮತ್ತು ಸೀಮಾಪುರಿ ಸೇರಿದಂತೆ 43 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿದ್ದು, ಆ ಸ್ಥಳಗಳಲ್ಲಿ ಅರೆ ಸೇನಾಪಡೆಯು ಗಸ್ತು ತಿರುಗುತ್ತಿದ್ದು, ಕಾನೂನು ಸುವ್ಯವಸ್ಥೆ ಕೈಗೊಳ್ಳುವ ನಿಟ್ಟಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಉಪ ಕಮಿಷನರ್ (ಈಶಾನ್ಯ) ಜಾಯ್ ಟಿರ್ಕಿ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA