nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಗರೋತ್ಥಾನ ಯೋಜನೆ ಅನುಷ್ಠಾನ: ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತು: ಸಚಿವರ ಎಚ್ಚರಿಕೆ
    ತುಮಕೂರು May 18, 2025

    ನಗರೋತ್ಥಾನ ಯೋಜನೆ ಅನುಷ್ಠಾನ: ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತು: ಸಚಿವರ ಎಚ್ಚರಿಕೆ

    By adminMay 18, 2025No Comments3 Mins Read
    rahim khan

    ತುಮಕೂರು:  ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ ಅನುಷ್ಠಾನ ಮಾಡುವಲ್ಲಿ ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಎಚ್ಚರಿಕೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲೆಯ 10 ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಗರೋತ್ಥಾನ ಯೋಜನೆಯು ಪ್ರಾರಂಭವಾಗಿ 3 ವರ್ಷಗಳು ಕಳೆದರೂ ಕುಣಿಗಲ್ ಪುರಸಭೆಯಲ್ಲಿ ಕೇವಲ ಶೇ.14ರಷ್ಟು ಮಾತ್ರ ಭೌತಿಕ ಸಾಧನೆಯಾಗಿದೆ. ಕಾರಣವೇನೆಂದು ಪುರಸಭೆ ಮುಖ್ಯಾಧಿಕಾರಿ ಮಂಜುಳಾ ಅವರನ್ನು ಸಚಿವರು ತರಾಟೆಗೆ ತೆಗೆದುಕೊಂಡರು.

    ಅನುಮೋದನೆ ನೀಡಿದ 27 ಕಾಮಗಾರಿಗಳ ಪೈಕಿ ಕೇವಲ 4 ಕಾಮಗಾರಿಗಳನ್ನು ಮಾತ್ರ ಪೂರ್ಣಗೊಳಿಸಲಾಗಿದ್ದು, 6 ಕಾಮಗಾರಿಗಳು ಇನ್ನೂ ಟೆಂಡರು ಪ್ರಕ್ರಿಯೆ ಹಂತದಲ್ಲಿವೆ. ಇದೇ ರೀತಿ ಕಾಮಗಾರಿ ಪ್ರಗತಿಯಲ್ಲಿ ಹಿನ್ನಡೆ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಮನೆಗೆ ಕಳುಹಿಸಲು ಕ್ರಮವಿಡಲಾಗುವುದು ಎಂದು ಖಡಕ್ ಸೂಚನೆ ನೀಡಿದರು.

    ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ, ಕುಡಿಯುವ ನೀರು, ಸ್ವಚ್ಛತಾ ಕಾಮಗಾರಿಗಳಿಗಾಗಿ ಜಿಲ್ಲೆಗೆ ಈವರೆಗೂ ಒಟ್ಟು 44.71 ಕೋಟಿ ರೂ. ಬಿಡುಗಡೆಯಾಗಿದೆ. ಈಗಾಗಲೇ ಈ ಯೋಜನೆ ಪೂರ್ಣಗೊಳ್ಳುವ ಹಂತಕ್ಕೆ ತಲುಪಬೇಕಾಗಿತ್ತು. ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ನಿರೀಕ್ಷಿತ ಮಟ್ಟಕ್ಕೆ ಯೋಜನೆ ಪ್ರಗತಿಯಾಗಿಲ್ಲವೆಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

    ಕಾಮಗಾರಿ ವಿಳಂಬಕ್ಕೆ ಸಚಿವರು ಕಾರಣ ಕೇಳಿದಾಗ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ ಅವರು ಗುತ್ತಿಗೆದಾರರಿಂದ ಟೆಂಡರು ಅರ್ಜಿಗಳು ಸಲ್ಲಿಕೆಯಾಗದಿರುವುದರಿಂದ ಕಾಮಗಾರಿ ಕೈಗೊಳ್ಳಲು ತಡವಾಗಿದೆ ಎಂದು ಉತ್ತರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಸಿವಿಲ್ ಕಾಮಗಾರಿಗಳಿಗೆ ನಾಮುಂದು–ತಾಮುಂದು ಎಂದು ಟೆಂಡರ್ ಸಲ್ಲಿಸಲು ಗುತ್ತಿಗೆದಾರರು ತುದಿಗಾಲಿನಲ್ಲಿ ನಿಂತಿರುತ್ತಾರೆ. ಸಭೆಗೆ ತಪ್ಪು ಮಾಹಿತಿ ನೀಡಿದರೆ ನಾನು ಸಹಿಸುವುದಿಲ್ಲ. ವಿಳಂಬಕ್ಕೆ ಯಾವುದೇ ನೆಪ ಹೇಳದೆ ಆಗಸ್ಟ್ ಮಾಹೆಯೊಳಗೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕಾರ್ಯ ಪ್ರವೃತ್ತರಾಗಬೇಕೆಂದು ಸೂಚನೆ ನೀಡಿದರು.

    ಮುಂದಿನ ಮಾರ್ಚ್–2026ಕ್ಕೆ ಯೋಜನೆಯನ್ನು ಪೂರ್ಣಗೊಳಿಸಬೇಕಾಗಿರುವುದರಿಂದ ಜನವರಿ–2026ರೊಳಗೆ ಎಲ್ಲಾ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ನಿಗಧಿತ ಅವಧಿಯೊಳಗೆ ಟೆಂಡರು ಪ್ರಕ್ರಿಯೆಯನ್ನೂ ಮುಗಿಸಬೇಕು ಎಂದು ನಿರ್ದೇಶನ ನೀಡಿದರು.

    ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೀರಿನ ಸಮಸ್ಯೆ ಕಂಡು ಬಂದಿಲ್ಲ. ಎಲ್ಲಾ ವಾರ್ಡುಗಳಿಗೆ ಪ್ರತೀ ದಿನ ನೀರು ಸರಬರಾಜು ಮಾಡಲು ಎಲ್ಲಾ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾವಗಡ ಪುರಸಭೆಯ 2 ವಾರ್ಡುಗಳಲ್ಲಿ ಮಾತ್ರ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರತೀ ದಿನ ಬೆಳಿಗ್ಗೆ ಹಾಗೂ ಸಂಜೆ ಕ್ಷೇತ್ರಗಳಿಗೆ ಭೇಟಿ ನಿಡಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರ ಗಮನಕ್ಕೆ ತಂದರು.

    ಸಚಿವರು ಮುಂದುವರೆದು ಮಾತನಾಡಿ, ನಗರ ಪ್ರದೇಶ ವ್ಯಾಪ್ತಿಯಲ್ಲಿ ಕಲುಷಿತ ನೀರಿನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ, ಜೀವಹಾನಿ ಉಂಟಾದ ಯಾವುದೇ ಪ್ರಕರಣ ವರದಿಯಾದರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳು ನಮಗೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದರಲ್ಲದೆ, ನಾಗರಿಕರಿಗೆ ಶುದ್ಧ ನೀರು ಪೂರೈಕೆ ಮಾಡುವುದು ಅಧಿಕಾರಿಗಳ ಹೊಣೆ. ನಿರಂತರವಾಗಿ ಕುಡಿಯುವ ನೀರಿನ ಕ್ಲೋರಿನೇಷನ್ ಆಗಬೇಕು. ಓವರ್ ಹೆಡ್ ಟ್ಯಾಂಕುಗಳನ್ನು ಸ್ವಚ್ಛಗೊಳಿಸಬೇಕು. ಸಿವಿಲ್ ಕಾಮಗಾರಿ ಕೈಗೊಳ್ಳುವಾಗ ಒಳಚರಂಡಿ ನೀರು ಕುಡಿಯುವ ನೀರಿನ ಕೊಳವೆ ಮಾರ್ಗಕ್ಕೆ ಮಿಶ್ರಣವಾಗದಂತೆ ಜಾಗರೂಕತೆವಹಿಸಬೇಕು. ಕುಡಿಯುವ ನೀರಿನ ಪೈಪು ಹಾಗೂ ಒಳ ಚರಂಡಿ ಮಾರ್ಗಕ್ಕೂ ಅಂತರವಿರುವಂತೆ ಕಾಮಗಾರಿ ನಿರ್ವಹಿಸಬೇಕೆಂದು ನಿರ್ದೇಶನ ನೀಡಿದರು.

    ಪೌರಾಡಳಿತ ಇಲಾಖೆಯು ಜನರ ಸೇವೆಗಾಗಿ ಬದ್ಧವಾಗಿರಬೇಕು. ಸ್ವಚ್ಛತೆ, ತ್ಯಾಜ್ಯ ವಿಲೇವಾರಿ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಸೂಚನೆ ನೀಡಿದರು.

    ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್‌ಗಳನ್ನು ಶೀಘ್ರದಲ್ಲೇ ಉದ್ಘಾಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಭೆಗೆ ಮಾಹಿತಿ ನೀಡಿದಾಗ ಸಚಿವರು ಮಾತನಾಡಿ ಇಂದಿರಾ ಕ್ಯಾಂಟೀನ್‌ ಗಳಲ್ಲಿ ಗುತ್ತಿಗೆದಾರರು ಊಟ ಮಾಡುವವರ ಲೆಕ್ಕವನ್ನು ತಪ್ಪಾಗಿ ನೀಡಿ ಸುಳ್ಳು ಬಿಲ್ ಮಾಡಿಕೊಳ್ಳುವುದನ್ನು ತಡೆಯಲು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇನ್ನು ಮುಂದೆ ಸುಳ್ಳು ಬಿಲ್ಲುಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದರಲ್ಲದೆ, ಪೌರ ಕಾರ್ಮಿಕರ ನೇಮಕಾತಿ ಹಾಗೂ ವೇತನ ಪಾವತಿ ಬಗ್ಗೆ ಮಾಹಿತಿ ಪಡೆದರು.

    ಸಭೆಯಲ್ಲಿ ಎಸ್‌ಎಫ್‌ಸಿ, 15ನೇ ಹಣಕಾಸು, ಸ್ವಚ್ಛ ಭಾರತ್ ಮಿಷನ್ ಯೋಜನೆ, ತೆರಿಗೆ ವಸೂಲಾತಿ, ಎ–ಖಾತಾ/ಬಿ–ಖಾತಾ, ಕುಡಿಯುವ ನೀರಿನ ಕಾಮಗಾರಿ, ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಲಾಯಿತು. ಪೌರಾಡಳಿತ ಇಲಾಖೆಯ ಮುಖ್ಯ ಇಂಜಿನಿಯರ್ ರಾಧಾಕೃಷ್ಣ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳು ಹಾಗೂ ಇಂಜಿನಿಯರ್‌ ಗಳು ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

     

    admin
    • Website

    Related Posts

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಸರಗೂರು / ಎಚ್.ಡಿ. ಕೋಟೆ:  ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಅತಿ ದೊಡ್ಡ ಶಾಪವಾಗಿದ್ದು, ಇದರ ವಿರುದ್ಧ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು.…

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.