ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಮಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ನಿರ್ಧರಿಸಿತು.
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತ ರೂ.142.47 ಕೋಟಿ ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.
ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ 455 ಕೋಟಿ ರೂ.ಗಳಿಗೆ ಅಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ಬಿಟ್ಟುಹೋಗಿರುವ ಪ್ರದೇಶಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 2ನೇ ಹಂದಲ್ಲಿ 208.45 ಕೋಟಿ ಅಂದಾಜು ಮೊತ್ತದ ಕುಡಿಯು ನೀರಿನ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಾಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು 440.20 ಕೋಟಿ ರೂ.ಗಳ ಬಡ್ಡಿ ಮನ್ನಾ ಮಾಡುವ ಸಂಬಂಧ ಹೊರಡಿಸಿದ್ದ 20-01-2024ರ ಸರ್ಕಾರಿ ಅದೇಶಕ್ಕೆ ಘಟನೋತ್ತರ ಅನುಮೋದನೆಯನ್ನು ನೀಡಲಾಗಿದೆ.


