ಪ್ರಧಾನಿ ಮೋದಿ 3 ನೇ ಅವಧಿಗೆ ಪ್ರಧಾನಿ ಆಗುವ ಮೂಲಕ NDA ಸರ್ಕಾರದ ರಚನೆಗೆ ಪ್ರಮುಖ ಕಾರಣ ಆಗಿರೋ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನಲ್ಲಿ ತಮ್ಮ ರಾಜ್ಯಕ್ಕೆ ಹಲವು ಬೇಡಿಕೆಗಳನ್ನಟ್ಟಿದ್ದಾರೆ.
ಇಂದು NDA ಸರ್ಕಾರದ ಮೊದಲ ಬಜೆಟ್ ಮಂಡನೆಯಾಗುತ್ತಿದ್ದು, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಮೋದಿ ಎದುರು ಈ ಬೇಡಿಕೆಗಳನ್ನು ಇಟ್ಟಿದ್ದಾರೆ ಎನ್ನಲಾಗಿದೆ. ಆದರೆ ಇವುಗಳಿಗೆ ನಿರ್ಮಲಾ ಸೀತಾರಾಮನ್ ಅವರು ಹೇಗೆ ಸ್ಪಂದಿಸಿದ್ದಾರೆ ಎಂದು ನೋಡಬೇಕಿದೆ.
ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ವ್ಯಾಪಿಸಿರುವ ಬುಂಧೇಲ್ ಖಂಡ್ ರೀತಿಯಲ್ಲಿ ವಿಶೇಷ ಪ್ಯಾಕೇಜ್
* ಕೈಗಾರಿಕಾ ಪ್ರೋತ್ಸಾಹಧನ, ರಾಜಧಾನಿಯಾಗಿ ಅಮರಾವತಿ ನಗರವನ್ನು ನಿರ್ಮಿಸಲು ಪ್ಯಾಕೇಜ್.
* ಪೋಲಾವರಂ ವಿವಿಧೋದ್ದೇಶ ಯೋಜನೆಗೆ ಹಣ ಬಿಡುಗಡೆ.
* ರಾಜ್ಯ ಆರ್ಥಿಕ ವ್ಯವಹಾರಗಳ ಮೇಲೆ ತಾತ್ಕಾಲಿಕ ಹಿಡಿತ ಸಾಧಿಸಲು ಅಲ್ಪಾವಧಿಯ ಸಹಾಯ.
* ವಿಶೇಷ ನೆರವಿನ ಯೋಜನೆಯಡಿಯಲ್ಲಿ ಬಂಡವಾಳ ಹೂಡಿಕೆಗೆ ಹೆಚ್ಚುವರಿ ಆರ್ಥಿಕ ಸಹಾಯ.
* ರಸ್ತೆ, ಸೇತುವೆ, ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಂತಹ ಅಗತ್ಯ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್.
* ಬಿಪಿಸಿಎಲ್ ( Bharat Petroleum Corporation Limited) ರಿಫೈನರಿ ಹೊಸ ಘಟಕ ಆಂಧ್ರ ಪ್ರದೇಶದಲ್ಲಿ ಸ್ಥಾಪನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA