nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    ಕುಣಿಗಲ್ April 30, 2026

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    By adminApril 30, 2026No Comments2 Mins Read
    protest in kunigal

    ಕುಣಿಗಲ್: ರೈತರ ಕೃಷಿಗೆ ಅಸಮರ್ಪಕ ವಿದ್ಯುತ್ ಸರಬರಾಜು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

    ರೈತರಿಗೆ ಅವೈಜ್ಞಾನಿಕವಾಗಿ ಯಾವುದೇ ಸಮಯ ನಿಗದಿ ಇಲ್ಲದೆ ವಿದ್ಯುತ್ ನೀಡುವ ಕೆಪಿಟಿಸಿಎಲ್(ಬೆಸ್ಕಾಂ) ಅಧಿಕಾರಿಗಳ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್, ತಾಲ್ಲೂಕು ಅಧ್ಯಕ್ಷ ಅನಿಲ್ ಕುಮಾರ್ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಮತ್ತು ರೈತರು ಇಲ್ಲಿನ ಬೆಸ್ಕಾಂ ಕಾರ್ಯಪಾಲಕ ಅಭಿಯಂತರರ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳ ಬೇಜವಾಬ್ದಾರಿಯನ್ನು ಖಂಡಿಸಿ ಧಿಕ್ಕಾರ ಕೂಗಿದರು.

    ರೈತಸಂಘ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಮಾತನಾಡಿ, ರಾಜ್ಯ ಸರ್ಕಾರ ರೈತರಿಗೆ ಏಳು ಗಂಟೆ ಉಚಿತ 3 ಫೇಸ್ ವಿದ್ಯುತ್ ನೀಡುವುದಾಗಿ ಹೇಳಿ, ದಿನಕ್ಕೆ ಕನಿಷ್ಠ ಎರಡು ಗಂಟೆ ವಿದ್ಯುತ್ ನೀಡುತ್ತಿಲ್ಲ. ಹಗಲು ಹೊತ್ತು ವಿದ್ಯುತ್ ಸಮರ್ಪಕವಾಗಿ ನೀಡುತ್ತಿಲ್ಲ. ರಾತ್ರಿ ವೇಳೆ ಮನ ಬಂದಂತೆ ಕರೆಂಟ್ ನೀಡುತ್ತಿದ್ದಾರೆ. ರೈತರು ಬೆಸ್ಕಾಂ ನೀಡುವ ವಿದ್ಯುತ್‌ಗಾಗಿ ಹೆಂಡತಿ, ಮಕ್ಕಳನ್ನು ಬಿಟ್ಟು ಕಾಡು ಪ್ರಾಣಿಗಳ ಹಾವಳಿ ನಡುವೆ ತೋಟ ಹೊಲದಲ್ಲಿ ಮಲಗುವ ಸ್ಥಿತಿ ಎದುರಾಗಿದೆ ಎಂದರು.

    ಕೈಗಾರಿಕಾ ವಲಯಕ್ಕೆ ಹಗಲು ಕರೆಂಟ್ ನೀಡಿ, ರೈತರಿಗೆ ಅವೈಜ್ಞಾನಿಕವಾಗಿ ಯಾವುದೇ ಸಮಯ ನಿಗದಿ ಇಲ್ಲದೆ ಕರೆಂಟ್ ನೀಡುವ ಬೆಸ್ಕಾಂ ಅಧಿಕಾರಿಗಳ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು. ಕೃಷಿ ವಲಯ ಉತ್ಪಾದನೆ ಮಾಡುವುದನ್ನು ಕೈಬಿಟ್ಟರೆ ಕೈಗಾರಿಕಾ ವಲಯದ ಉತ್ಪಾದನೆಯಿಂದ ಏನೂ ಮಾಡಲು ಆಗದು ಎಂಬ ಅರಿವು ಅಧಿಕಾರಿಗಳಿಗೆ ಇರಬೇಕು. ತಾಲೂಕು ಸೇರಿ ಜಿಲ್ಲೆಯಲ್ಲಿ ಸಾಕಷ್ಟು ವಿದ್ಯುತ್ ಲಭ್ಯವಿದ್ದರೂ ಸಹ, ಸೌರಶಕ್ತಿ ಘಟಕದ ವಿದ್ಯುತ್ ವಿನಾಶವಾಗುತ್ತಿದೆ ಎಂದು ಅವರು ತಿಳಿಸಿದರು.

    ಅಧಿಕಾರಿಗಳು ನಮಗೆ ಇಷ್ಟಬಂದಂತೆ ವಿದ್ಯುತ್ ಸರಬರಾಜು ಮಾಡುತ್ತಿದ್ದಾರೆ. ರೈತರು ಬೆಳೆದ ಬೆಳೆಗಳನ್ನು ಉಳಿಸಿಕೊಳ್ಳಲು ಪರದಾಡುವ ಪರಿಸ್ಥಿತಿ ಎದುರಾಗಿದೆ. ತೆಂಗು, ಅಡಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ಕಷ್ಟಕರವಾಗಿದೆ. ಹಾಗಾಗಿ ತಾಲೂಕಿಗೆ ಸಮರ್ಪಕ ವಿದ್ಯುತ್ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ಕಚೇರಿಗೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವ ಮೂಲಕ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಬೆಸ್ಕಾಂಗೆ ಎಚ್ಚರಿಕೆ ನೀಡಿದರು.

    ರೈತ ಸಂಘದ ತಾಲೂಕು ಅಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ, ರೈತರು ಲಕ್ಷಾಂತರ ಹಣ ಖರ್ಚು ಮಾಡಿ ಕೊಳವೆ ಬಾವಿ ಕೊರೆಸಿ, ತೋಟಗಳನ್ನು ಮಾಡಿದ್ದಾರೆ. ಬೆಸ್ಕಾಂನವರು ವಿದ್ಯುತ್ ಅನ್ನು ಸಮರ್ಪಕವಾಗಿ ಕೊಡದಿದ್ದರೆ ರೈತ ಎಲ್ಲಿಗೆ ಹೋಗಬೇಕು? ರೈತ ಸಾಲ ಮಾಡಿ ಇಂದು ಆತ್ಮಹತ್ಯೆ ದಾರಿ ಹಿಡಿದಿದ್ದಾನೆ ಎಂದರೆ ಅದಕ್ಕೆ ನೇರ ಹೊಣೆ ಬೆಸ್ಕಾಂ ಇಲಾಖೆಯಾಗಲಿದೆ ಎಂದರು.

    ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾದ ಹೊಸರಂಗಯ್ಯನಪಾಳ್ಯ ವೆಂಕಟೇಶ್, ತೆಪ್ಪಸಂದ್ರ ಆಟೋ ದೇವರಾಜು, ವೆಂಕಟರಾಮು, ಲಿಂಗರಾಜು, ಕೃಷ್ಣ, ರಾಜೇಶ್, ಪಿ.ಎಸ್. ರಾಮು, ವೈ.ಕೆ.ಶ್ರೀನಿವಾಸ್, ಮುದ್ದುರಂಗ, ಟಿ.ಬಿ.ದೇವರಾಜು, ಮೂರ್ತಿ, ಮಂಜುನಾಥ್, ಟಿ.ವೆಂಕಟೇಶ್ ಮೊದಲಾದವರು ಇದ್ದರು.

    ಹುಲಿಯೂರುದುರ್ಗದಲ್ಲಿ ಮೇ 15 ರ ಒಳಗೆ 400 ಕೆ.ವಿ ಸ್ಟೇಷನ್ ಪ್ರಾರಂಭವಾಗಲಿದೆ. ಇದು ಚಾಲನೆ ಆದರೆ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ಪರಿಹಾರವಾಗಲಿದೆ. 14 ಸಬ್ ಸ್ಟೇಷನ್‌ ಗಳು ಇದ್ದು ಇವುಗಳು ಸಾಕಷ್ಟು ಓವರ್ ಲೋಡ್ ಆಗುತ್ತಿವೆ. ಹೊಸದಾಗಿ ತಾಲೂಕಿನ ಮೊಗನಪುರ, ಗೌಡಗೆರೆ, ಶೆಟ್ಟಗೆರೆ, ಬೆಗೂರು ಅಮ್ಮನಿಕೆರೆ ಗ್ರಾಮಕ್ಕೆ ನಾಲ್ಕು ಸ್ಟೇಷನ್‌ಗಳು ಮಂಜೂರಾಗಿವೆ ಎಂದು ಬೆಸ್ಕಾಂ ಇಇ ಪುರುಷೋತ್ತಮ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    ಕುಣಿಗಲ್: ಮೇಣದ ಬತ್ತಿ ಹಿಡಿದು ಎಸ್‌ ಐಆರ್ ಜಾಗೃತಿ ಜಾಥಾ

    July 14, 2026

    ಮಹಿಳೆಯರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಿ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ

    July 14, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ…

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.