ಪಾವಗಡ: ಪಾವಗಡ ತಾಲೂಕಿನ ಹೊಸಕೋಟೆ ಹೋಬಳಿಯ ಇಂದ್ರಬೆಟ್ಟ ಗ್ರಾಮದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 133ನೇ ಜಯಂತೋತ್ಸವ ಮತ್ತು ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗಿದೆ.
ಗ್ರಾಮದ ಮಹಿಳೆಯರು ಪೂರ್ಣ ಕುಂಭದೊಂದಿಗೆ ಗ್ರಾಮದಲ್ಲಿ ಮೆರವಣಿಗೆ ಮೂಲಕ ವೇದಿಕೆಯನ್ನು ಸೇರಿದ್ದಾರೆ. ನೂತನ ಸಮುದಾಯ ಭವನವನ್ನು ಬೆಂಗಳೂರು ಮಹಾರಾಣಿ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಡಾ. ಗೋವಿಂದಪ್ಪ ಪಾವಗಡ ಅವರು ಉದ್ಘಾಟಿಸಿದ್ದಾರೆ.

ಕಾರ್ಯಕ್ರಮದ ಪ್ರಧಾನ ಭಾಷಣವನ್ನು ಹೈಕೋರ್ಟ್ ವಕೀಲರು ಹಾಗೂ ಹೋರಾಟಗಾರರಾದ ಪ್ರೊಫೆಸರ್ ಹರಿರಾಮ್ ಅವರು ನೆರವೇರಿಸಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಸದಸ್ಯೆ ಪಾರ್ವತಮ್ಮ ರವಿ ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯದರ್ಶಿಗಳಾದ ಐಎ ನಾರಾಯಣಪ್ಪ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಪ್ರೇಮಜ್ಯೋತಿ, ಹಿರಿಯ ಹೋರಾಟಗಾರರಾದ ಡಾ. ಸುಬ್ಬರಾಜು, ಎಚ್.ಕೆಂಚರಾಯ, ಕುಮಾರ್ ಇಂದ್ರಬೆಟ್ಟ, ಗ್ರಾಮದ ಯುವಕರು ಸೇರಿದಂತೆ ಹಲವರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


