ಬೆಂಗಳೂರು: ಪಬ್ ಗೆ ಹೋಗಿದ್ದ ಮಹಿಳೆಯೊಬ್ಬರಿಗೆ ಮದ್ಯ ಸೇವಿಸುವಂತೆ ಒತ್ತಾಯಿಸಿ ಅನುಚಿತವಾಗಿ ವರ್ತಿಸಿದ ಯುವಕನ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ.
ಹೊಸ ವರ್ಷದ ಸಂಭ್ರಮಾಚರಣೆಗೆ ಮಹಿಳೆ ಮಾರತ್ತಹಳ್ಳಿಯ ಪಬ್ ಗೆ ತೆರಳಿದ್ದರು. ಈ ವೇಳೆ ಪಾನಮತ್ತನಾಗಿದ್ದ ಯುವಕ, ಮದ್ಯ ಸೇವಿಸುವಂತೆ ಒತ್ತಾಯಿಸಿ, ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಮಂಗಳವಾರ ರಾತ್ರಿ ಮಹಿಳೆ ಗೆಳೆಯನೊಂದಿಗೆ ಪಬ್ ಗೆ ಭೇಟಿ ನೀಡಿದ್ದರು. ಯುವಕ ಅನುಚಿತವಾಗಿ ವರ್ತಿಸಿದ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಸ್ಥಳಕ್ಕೆ ಬಂದ ಬೌನ್ಸರ್ ಗಳು ಯುವಕನನ್ನು ಪಬ್ ನಿಂದ ಹೊರ ಕಳುಹಿಸಿದ್ದಾರೆ. ಆದರೆ ಪಬ್ ನಿಂದ ಆತನನ್ನು ಹೊರಗೆ ಕಳುಹಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಾಗಿ ಪಬ್ನಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದು, ತನಿಖೆ ಆರಂಭಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx