ಮಧುಗಿರಿ: ಅದೃಷ್ಠ ಭೈರವಿ ದೇವಸ್ಥಾನ ಉದ್ಘಾಟನಾ ಸಮಾರಂಭ ಅ.24 ಭಾನುವಾರ ಹಾಗೂ 25 ಸೋಮವಾರ ನೆಡೆಯಲಿದ್ದು ಭಕ್ತಾದಿಗಳು ಆಗಮಿಸಿ ತಾಯಿಯ ಕೃಪೆಗೆ ಪಾತ್ರರಾಗಬೇಕೆಂದು ಡಾ.ಮನೋಹರ್ ಗುರೂಜಿ ತಿಳಿಸಿದರು.
ತಾಲ್ಲೂಕಿನ ಕಸಬಾ ಹೋಬಳಿಯ ಪುಟ್ಟೇನಹಳ್ಳಿ ಗ್ರಾಮದಲ್ಲಿ ಅದೃಷ್ಠ ಭೈರವಿ ದೇವಸ್ಥಾನ ಉದ್ಘಾಟನೆ, ಗಣಪತಿ, ಶಿವ, ಮತ್ತು ಅದೃಷ್ಠ ಭೈರವಿದೇವಿ ದೇವರುಗಳ ಪ್ರತಿಷ್ಟಾಪನೆ ಮತ್ತು ಕುಂಬಾಭಿಷೇಕ ಕಾರ್ಯಕ್ರಮ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಬೇಕು ಎಂದರು.
ಭಕ್ತಾಧಿಗಳಿಗೆ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದ್ದು ಸಕಾಲಕ್ಕೆ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿಸಲಾಗಿದೆ.
ವರದಿ: ಅಬೀದ್, ಮಧುಗಿರಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC