ತುಮಕೂರಿನ ಇಪಿಎಫ್ ಒ, ಪ್ರಾದೇಶಿಕ ಕಚೇರಿ ನೂತನ ಕಚೇರಿ ಕಟ್ಟಡವನ್ನು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ರಾಮೇಶ್ವರ ತೇಲಿ ಅವರು ನವೆಂಬರ್ 1ರಂದು ನಡೆದ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್ ಅವರು ಉಪಸ್ಥಿತರಿದ್ದರು ಎಂದು ತುಮಕೂರು ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.