ತುಮಕೂರು: ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆಯು ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಸಹಯೋಗದಲ್ಲಿ ಡಿಸೆಂಬರ್ 10ರಂದು ಬೆಳಿಗ್ಗೆ 11 ಗಂಟೆಗೆ ಆದಾಯ ತೆರಿಗೆ ಮಹತ್ವ’ ಕುರಿತು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮವು ನಗರದ ಎಪಿಎಂಸಿ ಆವರಣದಲ್ಲಿರುವ ಛೇಂಬರ್ ಆಫ್ ಕಾಮರ್ಸ್ ಕಚೇರಿಯಲ್ಲಿ ನಡೆಯಲಿದ್ದು, ಬೆಂಗಳೂರು ವಲಯದ ಆದಾಯ ತೆರಿಗೆ ಹೆಚ್ಚುವರಿ ಆಯುಕ್ತ ಡಿ. ಕಿರಣ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಆದಾಯದ ರಿಟರ್ನ್ಸ್ ಸಲ್ಲಿಕೆ, ಆದಾಯ ತೆರಿಗೆ ಇಲಾಖೆ ಹೊರಡಿಸಿದ ಸೂಚನೆಗಳ ಅನುಸರಣೆ, ಆದಾಯ ತೆರಿಗೆ ಸಾಧಕ ಮತ್ತು ಭಾದಕ ಕುರಿತು ಅಗತ್ಯ ತಿಳುವಳಿಕೆ ಹಾಗೂ ವಿವಾದ್ ಸೇ ವಿಶ್ವಾಸ್ ಯೋಜನೆ–2024 ಕುರಿತು ಹೆಚ್ಚಿನ ಅರಿವು ಮೂಡಿಸಲಾಗುವುದು. ವೀಶೇಷವಾಗಿ ಜಿಲ್ಲೆಯ ಎಲ್ಲಾ ಸಾಲ ಸಹಕಾರ ಸಂಘ’ಗಳ ವಲಯಕ್ಕೆ ಅರಿವು ಮೂಡಿಸಲು ಈ ಕಾರ್ಯಕ್ರಮ ಪ್ರಯೋಜನಕಾರಿಯಾಗಿದೆ ಎಂದು ಆದಾಯ ತೆರಿಗೆ ಅಧಿಕಾರಿ ಹೆಚ್.ಎಸ್. ಗುರುನಾಥ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx