nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026
    Facebook Twitter Instagram
    ಟ್ರೆಂಡಿಂಗ್
    • ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!
    • ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶಾತಿ ಹೆಚ್ಚಳ: ಡಾ.ಎಸ್.ಬಿ.ಅಪ್ಪಾಜಿಗೌಡ ಹೇಳಿಕೆ
    ತುಮಕೂರು March 17, 2024

    ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶಾತಿ ಹೆಚ್ಚಳ: ಡಾ.ಎಸ್.ಬಿ.ಅಪ್ಪಾಜಿಗೌಡ ಹೇಳಿಕೆ

    By adminMarch 17, 2024No Comments2 Mins Read
    tumakuru

    ತುಮಕೂರು: ಇಂದು ಸರ್ಕಾರಿ ಪದವಿ ಕಾಲೇಜುಗಳು ಪರಿಣಿತ ಅಧ್ಯಾಪಕರನ್ನು ಒಳಗೊಂಡಿದ್ದು ಇದರಿಂದ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಗಣನೀಯವಾಗಿ ಪ್ರವೇಶಾತಿಯಲ್ಲಿ ಹೆಚ್ಚಾಗಿರುವುದು ಕಂಡು ಬಂದಿರುತ್ತದೆ ಎಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಎಸ್.ಬಿ.ಅಪ್ಪಾಜಿಗೌಡ ಹೇಳಿದರು.

    ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಹಾಗೂ ವಾದ್ವಾನಿ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ  ಉದ್ಯೋಗ ಕೌಶಲ ತರಬೇತಿ ಕಾರ್ಯಾಗಾರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.


    Provided by
    Provided by

    ತರಬೇತಿಯಲ್ಲಿ ಪಡೆದ ಉದ್ಯೋಗ ಕೌಶಲ್ಯದ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಮುಟ್ಟಿಸುವ ಮೂಲಕ ತರಬೇತಿಯ ಉದ್ದೇಶವನ್ನು ಸಾರ್ಥಕಗೊಳಿಸಬೇಕು. ವಿದ್ಯಾರ್ಥಿಗಳಿಗೆ ವಿವಿಧ ಉದ್ಯೋಗ ಕೌಶಲ್ಯದ ಮಾಹಿತಿಯನ್ನು ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ಮಾಡುವ ಜವಾಬ್ದಾರಿ ಬೋಧಕರದ್ದು ಎಂದರು.

    ರಾಜ್ಯದಲ್ಲಿ ಶೇ.2 ರಷ್ಟು ಮಾತ್ರ ಸರ್ಕಾರಿ ಉದ್ಯೋಗಗಳು ಲಭ್ಯವಿರುತ್ತವೆ. ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಸಿಗುವಂತಹ ಉದ್ಯೋಗದ ಬಗ್ಗೆಯೂ ಬೋಧಕರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು. ಉದ್ಯೋಗ ಕೌಶಲ್ಯದಿಂದ ಸಾಕಷ್ಟು ಯುವಕರು ಉದ್ಯೋಗವನ್ನು ಕಂಡುಕೊಂಡು ಜೀವನ ಸಾಗಿಸಬಹುದು. ಈ ನಿಟ್ಟಿನಲ್ಲಿ ಸರ್ಕಾರ ಉಪಯುಕ್ತ ಯೋಜನೆಗೆ ಹಸಿರುನಿಶಾನೆ ತೋರಿಸಿದ್ದು ಯುವಪೀಳಿಗೆ ಇದರತ್ತ ಕಣ್ಣಾಯಿಸಬೇಕು ಎಂದು ಸಲಹೆ ನೀಡಿದರು.

    ಕಾಲೇಜು ಶಿಕ್ಷಣ ಇಲಾಖೆ ವಿಶೇಷಾಧಿಕಾರಿ ಕೆ.ಸಿ.ಬಸವರಾಜ್ ಮಾತನಾಡಿ, ಇಲಾಖೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವು ಉಪಯುಕ್ತ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಇಲಾಖೆಯಲ್ಲಿರುವ ಹಿರಿಯು ಅಧಿಕಾರಿಗಳು ಈ ಕ್ಷೇತ್ರವನ್ನು ಹೆಚ್ಚಿನದಾಗಿ ಬೆಳೆಸುವ ಸದುದ್ದೇಶದಿಂದ ಕಾಲೇಜುಗಳಲ್ಲಿ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ನೀಡಲಾಗುತ್ತಿದ್ದು ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿಗಳು ವ್ಯವಸ್ಥಿತವಾಗಿ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ಹಾಗೂ ತರಬೇತಿ ನೀಡುವ ಮೂಲಕ ಇಲಾಖೆಗೆ ಗೌರವ ಹೆಚ್ಚಿಸುವ ಕಾರ್ಯ ಮಾಡಬೇಕಿದೆ ಎಂದರು.

    ಶಿಬಿರಾರ್ಥಿ ಮಧುಶ್ರೀ ಮಾತನಾಡಿ, ಉದ್ಯೋಗ ಕೌಶಲ ತರಬೇತಿಯಲ್ಲಿ ಹಲವು ವಿಷಯಗಳು ನಮಗೆ ತಿಳಿಸಲಾಯಿತು. ಪದವಿ ಪಡೆದು ಉದ್ಯೋಗ ಹುಡುಕುವ ತವಕದಲ್ಲಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯಿಂದ ಉಪಯೋಗವಾಗುತ್ತದೆ. ಇದರ ಬಗ್ಗೆ ವಾದ್ವಾನಿ ಪೌಂಡೇಶನ್ ತರಬೇತಿದಾರರು ಉತ್ತಮ ಮಾಹಿತಿಯನ್ನು ನೀಡಿದ್ದಾರೆ. ಇದರಿಂದ ನಮಗೂ ಹಾಗೂ ವಿದ್ಯಾರ್ಥಿಗಳಿಗೂ ಅನುಕೂಲ ಆಗುತ್ತದೆ.  ಕಾಲೇಜು ಶಿಕ್ಷಣ ಇಲಾಖೆ ಇಂತಹ ಉಪಯುಕ್ತ ಕಾರ್ಯಕ್ರಮಗಳನ್ನು ಹೆಚ್ಚೆಚ್ಚು ಆಯೋಜಿಸುವುದು ಅತ್ಯವಾಶ್ಯವಾಗಿದೆ ಎಂದು ಹೇಳಿದರು.

    ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯೆ ತರುನ್ನುಂ ನಿಖತ್, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉದ್ಯೋಗ ಕೌಶಲ ತರಬೇತಿ ನೀಡಲು ನಮ್ಮ ಪದವಿ ಕಾಲೇಜಿನಲ್ಲಿ ಅವಕಾಶ ಕಲ್ಪಿಸಿದ ಇಲಾಖೆಗೆ ಧನ್ಯವಾದಗಳು. ಪ್ರಸ್ತುತ ಪದವಿ ಕಲಿತ, ಕಲಿಯುತ್ತಿರುವ ಮಕ್ಕಳಿಗೆ ಕೌಶಲದ ಬಗ್ಗೆ ಬೋಧಕರು ಅರಿವು ಮೂಡಿಸುವ ಕೆಲಸ ಮಾಡಬೇಕು. ಇದೊಂದು ಅವಶ್ಯಕವಾಗಿರುವ ಯೋಜನೆಯಾಗಿದ್ದು, ಹೆಚ್ಚಿನ ಪ್ರಚಾರ ಮಾಡುವ ಮೂಲಕ ನಿರುದ್ಯೋಗಸ್ಥ ಯುವಕರಿಗೆ ಆಸರೆಯಾಗಬೇಕು ಎಂದರು.

    ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಐಟಿ ನೋಡಲ್ ಅಥಿಕಾರಿ ಡಾ.ನಂದಿತಾ ಪ್ರಸಾದ್, ಕಾಲೇಜು ಶಿಕ್ಷಣ ಇಲಾಖೆಯ ಮಂಜುನಾಥ್, ವಾಧ್ವಾನಿ ಫೌಂಡೇಶನ್ ತರಬೇತುದಾರರಾದ ಸ್ವಾತಿ, ವಿನಯ, ಡಾ.ಆಯಿಷಾ, ಡಾ.ವಸಂತಕುಮಾರಿ, ಸಿ.ಸಿ.ಬಾರಕೇರ, ಡಾ.ಯೋಗೀಶ್, ಡಾ.ರೇಣುಕಾ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ತುಮಕೂರು: 2.4 ಎಕರೆ ಜಮೀನನ್ನು ತಂದೆಯಿಂದ ತಮ್ಮ ಹೆಸರಿಗೆ ಬರೆಯಿಸಿ ಕೊಂಡು ನಂತರ ತಂದೆ ತಾಯಿಯನ್ನು ಆರೈಕೆ ಮಾಡದೇ, ಅಮಾನವೀಯತೆ…

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.