ರಾಜ್ಯ ಸರ್ಕಾರ 6 ತಿಂಗಳಿನಲ್ಲಿ ಎರಡನೇ ಬಾರಿಗೆ ಮದ್ಯದ ಮೇಲಿನ ತೆರಿಗೆ ಹೆಚ್ಚಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದಕ್ಕೆ ಪುಷ್ಠಿ ಎಂಬಂತೆ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಲು ಸಜ್ಜಾಗಿದೆ.
ಸರ್ಕಾರದ ಐದು ಗ್ಯಾರಂಟಿಗಳಿಗೆ ಹಣ ಹೊಂದಿಸಲು ತೆರಿಗೆ ಹೆಚ್ಚಿಸಲಾಗುತ್ತಿದೆ ಎಂದು ಚರ್ಚೆಗಳಾಗುತ್ತಿವೆ. ಗ್ಯಾರಂಟಿ ಯೋಜನೆಗಳಿಗೆ ಕೋಟಿ, ಕೋಟಿ ಹಣದ ಅವಶ್ಯಕತೆಯಿದ್ದು, ಈ ಹಣವನ್ನು ಹೊಂದಾಣಿಕೆ ಮಾಡಲು ಸರ್ಕಾರ ತೆರಿಗೆ ಹೆಚ್ಚಳಕ್ಕೆ ಮುಂದಾಗಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ.


