nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಸರಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಚಿತ್ರಕಲಾ ಪ್ರದರ್ಶನ
    ತುಮಕೂರು August 17, 2023

    ತುಮಕೂರು ಸರಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಚಿತ್ರಕಲಾ ಪ್ರದರ್ಶನ

    By adminAugust 17, 2023No Comments2 Mins Read
    chithrakala

    ತುಮಕೂರು ನಗರದಲ್ಲಿರುವ ಸರಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ 77ನೇ ಸ್ವಾತಂತ್ರೋತ್ಸವವನ್ನು ಚಿತ್ರಕಲಾ ಪ್ರದರ್ಶನ ಏರ್ಪಡಿಸುವ ಮೂಲಕ ಆಚರಿಸಲಾಯಿತು.  ಇದೇ ವೇಳೆ ಕಾಲೇಜಿನಲ್ಲಿ ಕಲಿಯುತ್ತಿರುವ ಬಿ.ವಿ.ಎ ಪದವಿ ವಿದ್ಯಾರ್ಥಿಗಳು ತಾವೇ ರಚಿಸಿದ ವಿವಿಧ ವರ್ಣ ಚಿತ್ರಗಳನ್ನು ಕಾಲೇಜಿನಲ್ಲಿ ಪ್ರದರ್ಶಿಸಲಾಯಿತು.

    ಕಾಲೇಜಿನ  ಪ್ರಾಂಶುಪಾಲರಾದ ಸಿ.ಸಿ.ಬಾರಕೇರರವರು, ಧ್ವಜಾರೋಹಣ ನೆರವೇರಿಸಿ ಮಾತನಾಡಿ,  ಸ್ವಾತಂತ್ರ್ಯ ನಮ್ಮ ಹಕ್ಕು ಹಾಗಂತ ಸ್ವೇಚ್ಛೆಯಿಂದ ಬಾಳದೆ ಪರಧರ್ಮ- ಸಹಿಷ್ಣುತೆ, ವಿವಿಧ ಭಾಷೆ,  ಸಂಸ್ಕೃತಿ, ಧಾರ್ಮಿಕ ಆಚರಣೆಗಳನ್ನು ಹಾಗೂ ದೇಶದ ಕಲಾ ಪರಂಪರೆಗಳನ್ನು ಉಳಿಸಿ ಬೆಳೆಸಲು ಎಲ್ಲರೂ ಸಹಕರಿಸಬೇಕು ಎಂದರು.


    Provided by
    Provided by

    ಚಿತ್ರಕಲಾ ಪ್ರದರ್ಶನದ ಉದ್ಘಾಟಕರಾಗಿ ಆಗಮಿಸಿದ ತುಮಕೂರಿನ ಹಿರಿಯ ಚಿತ್ರಕಲಾವಿದರು ಹಾಗೂ ನಿವೃತ್ತ ಶಿಕ್ಷಕರಾದ ಎಂ.ಎನ್. ಸುಬ್ರಹ್ಮಣ್ಯ ಮಾತನಾಡಿ, ಕಲಾ ವಿದ್ಯಾರ್ಥಿಗಳು ಸಾಹಿತ್ಯಾಭ್ಯಾಸವನ್ನು ರೂಢಿಸಿಕೊಂಡು  ಅರ್ಥಪೂರ್ಣ ಕಲಾಕೃತಿಗಳನ್ನು ರಚಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

    ಸಮಾರಂಭದ ಮುಖ್ಯ ಅತಿಥಿಗಳಾಗಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು  ಹಾಗೂ  ನಮ್ಮತುಮಕೂರು ವಾಹಿನಿಯ ಸಂಸ್ಥಾಪಕರಾದ ನಟರಾಜು ಜಿ.ಎಲ್. ಮಾತನಾಡಿ,  ನಾನು ಸಹ ಇದೇ ಕಾಲೇಜಿನಲ್ಲಿ ಓದಿದ್ದೇನೆ. ನಾವು ಕಲಿಯುವ ಸಂದರ್ಭದಲ್ಲಿ ಈಗಿನ ವಿದ್ಯಾರ್ಥಿಗಳಿಗೆ ಸಿಕ್ಕಿರುವ ಉತ್ತಮ ಶಿಕ್ಷಕರು ಮತ್ತು ಪ್ರದರ್ಶನ ಏರ್ಪಡಿಸುವಂತಹ  ಅವಕಾಶಗಳು ನಮಗೆ ಲಭಿಸಲಿಲ್ಲವಲ್ಲ ಎಂಬ ಕೊರಗು ಇದೆ. ನಿಮ್ಮ ಕಲಾಕೃತಿಗಳಲ್ಲಿ ಪ್ರಬುದ್ಧತೆ ಕಾಣಿಸುತ್ತಿದೆ. ಈ ಕಾಲೇಜಿನ ಅಭಿವೃದ್ಧಿಗಾಗಿ ನಮ್ಮ ಸಂಘದ ಸದಸ್ಯರು ಸದಾ ಸಿದ್ದರಾಗಿರುತ್ತೇವೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಿ.ಸಿ. ಬಾರಕೇರ ಮಾತನಾಡಿ,  ಸತತ ಪರಿಶ್ರಮಗಳಿಂದ ವಿದ್ಯಾರ್ಥಿಗಳು ಕಲಾ ಪ್ರೌಢಿಮೆ ಹೆಚ್ಚಿಸಿಕೊಳ್ಳಬೇಕು. ಜೊತೆಗೆ ಸಂವಹನ ಕಲೆ, ವಿವಿಧ ಭಾಷೆಗಳ ಪ್ರೌಢಿಮೆ ಬೆಳೆಸಿಕೊಳ್ಳಬೇಕು. ಕಲಾಕೃತಿಗಳು ತೆರೆದ ಪುಸ್ತಕಗಳಂತೆ ಅವುಗಳನ್ನು ನೋಡುಗರು ಕುತೂಹಲದಿಂದ ನೋಡುವಂತೆ ಕಲಾಕೃತಿಗಳಲ್ಲಿ ಸೃಜನಶೀಲತೆ ರೂಡಿಸಿಕೊಳ್ಳಬೇಕು ಎಂದರು.

    ಈ ಚಿತ್ರಕಲಾ ಪ್ರದರ್ಶನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳು ವ್ಯಕ್ತಪಡಿಸಿದರು. ಅವರೆಲ್ಲರಿಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಪ್ರಾರಂಭದಲ್ಲಿ ಕುಮಾರಿ ಶ್ರೀವಿದ್ಯಾ ಟಿ. ಎಸ್. ಪ್ರಾರ್ಥನೆ ಗೀತೆ ಹಾಡಿದರು. ಅತಿಥಿ ಉಪನ್ಯಾಸಕರಾದ  ರಂಗಸ್ವಾಮಿ ಆರ್. ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು.  ಕನ್ನಡ ಅತಿಥಿ ಉಪನ್ಯಾಸಕರಾದ ಡಾ. ಶಿವಕುಮಾರ್ ಎಸ್. ಸಿಂಗೆ ಕಾರ್ಯಕ್ರಮ ನಿರೂಪಿಸಿದರು. ಕೊನೆಗೆ ಕಂಪ್ಯೂಟರ್ ಶಿಕ್ಷಕರಾದ ಸತ್ಯನಾರಾಯಣ್ ಟಿ.ಎಸ್ ವಂದಿಸಿದರು. ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ ವಿಶ್ವೇಶ್ವರ ಪಟಗಾರ,  ವೆಂಕಟಲಕ್ಷ್ಮಿ ಸೇರಿದಂತೆ ಪಾಲಕರು ನಾಗರಿಕರು ಭಾಗವಹಿಸಿದ್ದರು.

    admin
    • Website

    Related Posts

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.