ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಆಗಸ್ಟ್ 14ರಂದು ಬೆಳಿಗ್ಗೆ 11 ಗಂಟೆಗೆ 5 ರಿಂದ 16 ವರ್ಷ ವಯೋಮಾನದ ಮಕ್ಕಳಿಗೆ ಚಿತ್ರಕಲೆ ಹಾಗೂ 5 ರಿಂದ 12 ವರ್ಷದ ಮಕ್ಕಳಿಗೆ ವೇಷಭೂಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳ ಪೋಷಕರು ಆಗಸ್ಟ್ 13ರೊಳಗಾಗಿ ಜಿಲ್ಲಾ ಬಾಲಭವನ ಕಚೇರಿ, ಮಹಾತ್ಮ ಗಾಂಧಿ ರಸ್ತೆ, ತುಮಕೂರು ಇಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಚಿತ್ರಕಲೆ ಸ್ಪರ್ಧೆಗೆ 150 ಮಕ್ಕಳು ಮತ್ತು ವೇಷಭೂಷಣ ಸ್ಪರ್ಧೆಗೆ 50 ಮಕ್ಕಳು ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ಸರ್ಕಾರಿ ಶಾಲೆ / ಸೌಲಭ್ಯ ವಂಚಿತ / ಗ್ರಾಮೀಣ ಮಕ್ಕಳಿಗೆ ಮೊದಲ ಆದ್ಯತೆ ನೀಡಲಾಗುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
