‘ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೋಲು ಅನುಭವಿಸಲಿದೆ ಎಂದು ಅರಿತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹತಾಶರಾಗಿ, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಇಂದು ಪ್ರಧಾನಮಂತ್ರಿಗಳು ನಮ್ಮ ಗ್ಯಾರಂಟಿ ಬಗ್ಗೆ ಮಾತನಾಡಿರುವುದು ಬಹಳ ಸಂತೋಷವಾಗಿದೆ. ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುವ ಮೂಲಕ ಮೋದಿ ಅವರು ತಮ್ಮ ಸರ್ಕಾರ ಜನರ ವಿಶ್ವಾಗಳಿಸಲು ವಿಫಲವಾಗಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ.
ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸಲು ವಿಫಲವಾಗಿವೆ. ಅವರು 2014ರ ಚುನಾವಣೆ ಸಮಯದಲ್ಲಿ ದೇಶದ ಮತದಾರರಿಗೆ ಮತದಾನ ಮಾಡುವ ಮುನ್ನ ಅಡುಗೆ ಅನಿಲ ಸಿಲಿಂಡರ್ ಗೆ ನಮಿಸಿ ಮತ ಹಾಕಿ ಎಂದಿದ್ದರು. ಈಗ ಅದನ್ನೇ ಮಾಡಬೇಕು ಎಂದು ರಾಜ್ಯದ ಜನರಿಗೆ ಹೇಳುತ್ತಿದ್ದೇವೆ.
ಮೀಸಲಾತಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಮೀಸಲಾತಿ ಎಲ್ಲಿದೆ? ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅವರು ತಮ್ಮ ಆದೇಶಕ್ಕೆ ತಡೆ ನೀಡಿದ್ದು, ಮೀಸಲಾತಿ ಹೆಸರಿನಲ್ಲಿ ಜನರಿಗೆ ಚಾಕಲೇಟ್ ನೀಡಿ ಮೋಸ ಮಾಡಿದ್ದಾರೆ’ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


