ನವದೆಹಲಿ: ಬಾಂಗ್ಲಾದೇಶದಲ್ಲಿ ಮೀಸಲಾತಿ ಪ್ರತಿಭಟನೆ ತೀವ್ರಗೊಂಡಿದ್ದು, ಹೀಗಾಗಿ ಅಲ್ಲಿಗೆ ಪ್ರಯಾಣಿಸದಂತೆ ಭಾರತ ತನ್ನ ಪ್ರಜೆಗಳಿಗೆ ಸಲಹೆ ನೀಡಿದೆ. ಇದೇ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರಗಳನ್ನು ಸೋಮವಾರ ಮುಚ್ಚಲಾಗುವುದು ಎಂದು ಢಾಕಾದಲ್ಲಿರುವ ಭಾರತದ ರಾಯಭಾರಿ ಕಚೇರಿ ತಿಳಿಸಿದೆ.
ಮುಂದಿನ ಸೂಚನೆ ಬರುವವರೆಗೂ ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ ಕಟ್ಟುನಿಟ್ಟಿನ ಸಲಹೆ ನೀಡಲಾಗಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಸ್ತುತ ಬಾಂಗ್ಲಾದೇಶದಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಎಚ್ಚರಿಕೆಯಿಂದಿರಲು ತಿಳಿಸಲಾಗಿದೆ. ಅನಗತ್ಯವಾಗಿ ಹೊರಗಡೆ ಸುತ್ತುವುದನ್ನು ತಪ್ಪಿಸಿ ಎಂದು ಹೇಳಲಾಗಿದೆ. ತುರ್ತು ಸಂದರ್ಭದಲ್ಲಿ ಢಾಕಾದಲ್ಲಿರುವ ಭಾರತೀಯ ರಾಜತಾಂತ್ರಿಕ ಕಚೇರಿಯನ್ನು ಸಂಪರ್ಕಿಸಿ ಎಂದು ಸೂಚಿಸಲಾಗಿದೆ ಎಂದು ಅದು ತಿಳಿಸಿದೆ.
ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಭಾನುವಾರ ಆಡಳಿತಾರೂಢ ಅವಾಮಿ ಲೀಗ್ ಪಕ್ಷದ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಸುಮಾರು 100 ಮಂದಿ ಮೃತಪಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296