nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ

    July 10, 2026

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026
    Facebook Twitter Instagram
    ಟ್ರೆಂಡಿಂಗ್
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    • ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
    • ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
    • ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
    • 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
    • ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
    ಜಿಲ್ಲಾ ಸುದ್ದಿ March 28, 2026

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    By adminMarch 28, 2026No Comments2 Mins Read
    v somanna

    ತಿಪಟೂರು: ಭಾರತ ಕ್ರೀಡಾ ಕ್ಷೇತ್ರ ಸೇರಿದಂತೆ, ಎಲ್ಲಾ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡುತ್ತಿದೆ. 2030ರಲ್ಲಿ ಒಲಿಂಪಿಕ್ಸ್ ಗೆ ಆತಿಥ್ಯ ವಹಿಸಲು ಭಾರತ ಸಮರ್ಥವಾಗಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

    ನಗರದ ಕೆವಿಎಸ್ ಕ್ರೀಡಾಂಗಣದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಮತ್ತು ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಜಂಟಿ ನೇತೃತ್ವದಲ್ಲಿ ಆಯೋಜಿಸಿರುವ ವಿಟಿಯು ರಾಜ್ಯ ಮಟ್ಟದ 27ನೇ ಅಂತರ ಮಹಾವಿದ್ಯಾಲಯ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಿಪಟೂರಿನಲ್ಲಿ ನಡೆಯುತ್ತಿರುವ ಈ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ಕಲ್ಪತರು ನಾಡಿಗೆ ಕೀರ್ತಿಯ ವಿಷಯವಾಗಿದೆ ಎಂದರು.

    1961ರಲ್ಲಿ ಸ್ಥಾಪಿತವಾದ ಈ ವಿದ್ಯಾ ಸಂಸ್ಥೆ ಗ್ರಾಮೀಣ ಭಾಗದ ಮಧ್ಯಮ ವರ್ಗದ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿರುವ ಹೆಗ್ಗಳಿಕೆಯನ್ನು ಹೊಂದಿದೆ. ದೇಶದ ಪ್ರಧಾನ ಮಂತ್ರಿಗಳು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, 2030ರ ಒಲಿಂಪಿಕ್ಸ್ ಕ್ರೀಡಾಕೂಟವನ್ನು ದೇಶದಲ್ಲಿ ಆಯೋಜಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಆ ವೇಳೆಗೆ ದೇಶ ಮತ್ತು ರಾಜ್ಯದ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸುವ ದೃಷ್ಟಿಯಿಂದ ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾಗಿದೆ ಎಂದರು.

    ಕ್ರೀಡಾಕೂಟದಲ್ಲಿ 142 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿರುವುದು ಸಂತಸದ ವಿಷಯ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 11 ವರ್ಷದ ಆಡಳಿತಾವಧಿಯಲ್ಲಿ ಗ್ರಾಮೀಣ ಜನರ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸುವ ಮೂಲಕ, ಜನರು ಆರೋಗ್ಯಕರ ಜೀವನ ನಡೆಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ರೈಲ್ವೆ ಇಲಾಖೆಯಲ್ಲಿ ಜಾತಿ, ಧರ್ಮ ಭೇದ ಭಾವವಿಲ್ಲದೆ, ಶಿಕ್ಷಣದ ಆಧಾರದ ಮೇಲೆ ತಿಂಗಳಿಗೆ 20ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಲಾಗುತ್ತಿದೆ. ಅಲ್ಲದೆ ಕ್ರೀಡೆಗಳಲ್ಲಿ ಭಾಗವಹಿಸಲು ಯುವಕರಿಗೆ ಉತ್ತೇಜನ ನೀಡಲಾಗುತ್ತಿದೆ. 2047ರ ವಿಕಸಿತ ಭಾರತದ ಗುರಿ ಸಾಧನೆಗೆ ದೇಶದ ಜನರು ದೃಢಸಂಕಲ್ಪ ಮಾಡಬೇಕಾಗಿದೆ. ಜಿಲ್ಲೆಯ ತಿಪಟೂರು ಮತ್ತು ಮಧುಗಿರಿ ತಾಲೂಕುಗಳು ಜಿಲ್ಲಾ ಕೇಂದ್ರಗಳಾಗುವ ಅರ್ಹತೆಯನ್ನು ಹೊಂದಿದ್ದು, ಅಭಿವೃದ್ಧಿಯ ಆಧಾರದ ಮೇಲೆ ಜಿಲ್ಲೆಗಳಾಗಿ ರೂಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ತಿಪಟೂರು ಅಭಿವೃದ್ಧಿಗೆ ಶಾಸಕ ಕೆ.ಷಡಕ್ಷರಿ ಹಾಗೂ ಮಾಜಿ ಸಚಿವ ಬಿ.ಸಿ. ನಾಗೇಶ್ ಸಾಕಷ್ಟು ಶ್ರಮ ವಹಿಸಿದ್ದಾರೆ. ಮುಂದಿನ 15 ದಿನಗಳಲ್ಲಿ ಅರಸೀಕೆರೆ-ಬೆಂಗಳೂರು ನಡುವೆ ಮೆಮೋ ರೈಲು ಸಂಚಾರ ಆರಂಭವಾಗಲಿದ್ದು, ಉದ್ಘಾಟನೆಗೆ ಆಗಮಿಸುವುದಾಗಿ ತಿಳಿಸಿದರು.

    ಕಾರ್ಯಕ್ರಮದ ಉದ್ಘಾಟನೆಗೂ ಮುನ್ನ ನಗರದ ಶ್ರೀ ಕೆಂಪಮ್ಮ ದೇವಾಲಯದ ಆವರಣದಿಂದ, ಕಾಲೇಜಿನ ಕ್ರೀಡಾಂಗಣದವರೆಗೆ ವಿವಿಧ ಸಾಂಸ್ಕೃತಿಕ ಮತ್ತು ಜಾನಪದ ಕಲಾತಂಡಗಳೊಂದಿಗೆ ಕ್ರೀಡಾ ಜ್ಯೋತಿ ಮೆರವಣಿಗೆ ಸಾಗಿ, ನೂರಾರು ವಿದ್ಯಾರ್ಥಿಗಳು ಮತ್ತು ಕ್ರೀಡಾಭಿಮಾನಿಗಳು ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ 142 ಕಾಲೇಜುಗಳ 2000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದು, ಬೆಳಿಗ್ಗೆ 6:00ಯಿಂದ ಸ್ಪರ್ಧೆಗಳು ಆರಂಭಗೊಂಡಿದ್ದು, ಮೊದಲ ದಿನವೇ 5000 ಮೀಟರ್ ಓಟ, ಎತ್ತರ ಜಿಗಿತ ಹಾಗೂ ಡಿಸ್ಕಸ್ ಥ್ರೋ ಸೇರಿದಂತೆ ಹಲವು ಸ್ಪರ್ಧೆಗಳು ನಡೆದವು ಎಂದರು.

    ಕಾರ್ಯಕ್ರಮದಲ್ಲಿ ವಿಟಿಯು ಕುಲಪತಿ ಡಾ. ಎಸ್.ವಿದ್ಯಾಶಂಕರ್, ಯುವಜನ ಕ್ರೀಡಾ ಇಲಾಖೆಯ ಆಯುಕ್ತ ಆರ್.ಚೇತನ್, ತಹಶೀಲ್ದಾರ್ ಹರ್ಷನ್ ಕುಮಾರ್, ಕಲ್ಪತರು ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ.ಕೆ. ತಿಪ್ಪೇರುದ್ರಪ್ಪ, ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಬೆಂಗಳೂರು ಪ್ರಾಂಶುಪಾಲ ಡಾ. ಎನ್.ಬಿ.ಭಾಗ್ಯಶ್ರೀ, ಅಂತರರಾಷ್ಟ್ರೀಯ ಕ್ರೀಡಾಪಟು ನಿರ್ಮಲ್ ಜೋಯಲ್, ದೈಹಿಕ ಶಿಕ್ಷಣ ನಿರ್ದೇಶಕ ಜಯಂತ್, ವಿದ್ಯಾ ಸಂಸ್ಥೆ ಉಪಾಧ್ಯಕ್ಷರಾದ ಬಾಗೇಪಲ್ಲಿ ನಟರಾಜು, ಬಸವರಾಜು, ಉಮೇಶ್, ದೀಪಕ್ ಕಾರ್ಯದರ್ಶಿಗಳಾದ ಉಮಾನಂಕರ್, ಗಂಗಾಧರ್, ಜಗದೀಶಮೂರ್ತಿ, ಸುಧಾಕರ್, ಖಜಾಂಚಿ ಶಿವಪ್ರಸಾದ್ ಮತ್ತು ಪ್ರಾಂಶುಪಾಲ ಸತೀಶ್ ಕುಮಾರ್ ಸೇರಿದಂತೆ ಅಧಿಕಾರಿಗಳು, ಕಾಲೇಜಿನ ಬೋಧಕ ವೃಂದ, ಸಿಬ್ಬಂದಿ ಹಾಗೂ ಸಾವಿರಾರು ಕ್ರೀಡಾಪಟುಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ

    July 10, 2026

    ತುಮಕೂರು: ನಗರದಿಂದ ಸುಮಾರು 7 ಕಿ.ಮೀ. ದೂರದಲ್ಲಿರುವ ಗೂಳೂರು ಬಳಿ 106 ಎಕರೆ 23 ಗುಂಟೆ ವಿಸ್ತೀರ್ಣದ ಅಮೂಲ್ಯ ಸಾರ್ವಜನಿಕ…

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ

    July 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.