ನವದೆಹಲಿ: ಪಹಲ್ಗಾಮ್ ದಾಳಿಯ ನಂತರ ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಭಾರತಕ್ಕೆ ಹೆಚ್ಚುವರಿಯಾಗಿ ಸಿಗಲಿರುವ ನೀರನ್ನು ವಿದ್ಯುತ್ ಬಳಕೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಸಿಂಧೂ ನದಿಯ ಉಪ ನದಿಯಾದ ಚೆನಾಬ್ ಮೂಲಕ ಹರಿಯುತ್ತಿದ್ದ ನೀರನ್ನು ತಡೆಹಿಡಿಯಲಾಗಿದೆ. ಕೃಷಿಗೆ ಅಧಿಕವಾಗಿ ಬಳಸಲಾಗುತ್ತಿದ್ದ ಚೆನಾಬ್ ನದಿ ನೀರನ್ನು ಇದೀಗ, ವಿದ್ಯುತ್ ಉತ್ಪಾದನೆಗೂ ಬಳಸಿಕೊಳ್ಳಲು ಯೋಜಿಸಲಾಗಿದೆ. ಹೀಗಾಗಿ, ನದಿಗೆ ಹೊಂದಿಕೊಂಡಿರುವ ರಣವೀಲ್ ಕಾಲುವೆಯ ಉದ್ದವನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಚೆನಾಬ್ ಮೂಲಕ ಪಾಕಿಸ್ತಾನಕ್ಕೆ ಹರಿದು ಹೋಗುತ್ತಿದ್ದ ನೀರಿನಿಂದ 3 ಸಾವಿರ ಮೆಗಾವ್ಯಾಟ್ ಜಲವಿದ್ಯುತ್ ಅನ್ನು ಉತ್ಪಾದಿಸಲು ಭಾರತ ಯೋಜಿಸುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ಅಧ್ಯಯನ ನಡೆಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW