ಭಾರತ ಪ್ರವಾಸದಲ್ಲಿರುವ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ವೇಳೆ ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಪ್ರಮುಖ ಪಾತ್ರವಹಿಸಬೇಕು ಎಂದು ಮೆಲೋನಿ ಮನವಿ ಮಾಡಿಕೊಂಡಿದ್ದು, ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲು ಭಾರತ ಸಂಪೂರ್ಣ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ದ್ವಿಪಕ್ಷೀಯ ಮಾತುಕತೆ ವೇಳೆ ಅನೇಕ ಜಾಗತಿಕ ವಿಚಾರಗಳ ಜತೆ ಉಕ್ರೇನ್ ಸಂಘರ್ಷದ ಬಗ್ಗೆಯೂ ಚರ್ಚೆಯಾಯಿತು. ನವದೆಹಲಿಯಲ್ಲಿ ಜಿ20 ವಿದೇಶಾಂಗ ಸಚಿವರ ಸಭೆ ನಡೆಯುತ್ತಿರುವ ಸಂದರ್ಭದಲ್ಲೇ ಮೋದಿ ಈ ಹೇಳಿಕೆ ನೀಡಿರುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ರಷ್ಯಾ –ಉಕ್ರೇನ್ ಯುದ್ಧದ ಆರಂಭದಿಂದಲೂ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂಬುದನ್ನು ಭಾರತ ಪ್ರತಿಪಾದಿಸುತ್ತಲೇ ಬಂದಿದೆ. ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲು ಭಾರತ ಪೂರ್ಣ ಸಿದ್ಧವಿದೆ ಎಂದು ಮೋದಿ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


