ಬೆಂಗಳೂರು: ಇಸ್ರೇಲ್–ಇರಾನ್ ಯುದ್ಧ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಬರಹವನ್ನು ಹಂಚಿಕೊಂಡ ಸಿದ್ದರಾಮಯ್ಯ ಅವರು ಭಾರತ ಈಗ ಮಾತನಾಡಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ.
ಇರಾನ್ ಮೇಲೆ ಇಸ್ರೇಲ್ ನಡೆಸಿದ ಅಪಾಯಕಾರಿ ದಾಳಿ ಕಾನೂನುಬಾಹಿರ. ಇದು ಪ್ರಾದೇಶಿಕ ಶಾಂತಿಗೆ ಬೆದರಿಕೆ ಹಾಕುತ್ತದೆ ಮತ್ತು ಭಾರತದ ಹಿತಾಸಕ್ತಿಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದಿದ್ದಾರೆ.
ಸೋನಿಯಾ ಗಾಂಧಿಯವರ ಲೇಖನವು ನಾಗರಿಕರ ಜೀವಗಳು ಬಲಿಯಾದಾಗ, ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದಾಗ ಮತ್ತು ರಾಜತಾಂತ್ರಿಕತೆಯನ್ನು ತ್ಯಜಿಸಿದಾಗ ಭಾರತ ಮೌನವಾಗಿರಲು ಸಾಧ್ಯವಿಲ್ಲ ಎಂಬುದನ್ನು ಪ್ರಬಲವಾಗಿ ನೆನಪಿಸುತ್ತದೆ ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಕಾಶ್ಮೀರ ಸೇರಿದಂತೆ ನಿರ್ಣಾಯಕ ಸಮಯದಲ್ಲಿ ಇರಾನ್ ಭಾರತದ ಪರವಾಗಿ ನಿಂತಿದ್ದರೂ ಕೇಂದ್ರ ಸರ್ಕಾರದ ಮೌನವಾಗಿದೆ. ಈ ಮೊದಲು ಗಾಜಾ ಈಗ ಇರಾನ್ ವಿಚಾರಲ್ಲಿ ಮೌನವಾಗಿರುವುದು ಶಾಂತಿಯನ್ನು ಪ್ರತಿಪಾದಿಸುವ ನಮ್ಮ ವಿದೇಶಾಂಗ ನೀತಿಯ ನಿರ್ಗಮನವನ್ನು ಸೂಚಿಸುತ್ತದೆ. ಪಶ್ಚಿಮ ಏಷ್ಯಾದಲ್ಲಿ ನಮ್ಮದೇ ಆದ ದೀರ್ಘಕಾಲೀನ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಭಾರತ ಈಗ ಮಾತನಾಡಬೇಕು ಎಂದು ಪೋಸ್ಟ್ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW