nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿನಿಂದ ಹುಬ್ಬಳ್ಳಿ ಪುಣೆ ವಂದೇ ಭಾರತ ರೈಲು ಸಂಚಾರ! ಇಲ್ಲಿದೆ ಸಂಪೂರ್ಣ ವಿವರ
    ರಾಷ್ಟ್ರೀಯ ಸುದ್ದಿ September 16, 2024

    ಇಂದಿನಿಂದ ಹುಬ್ಬಳ್ಳಿ ಪುಣೆ ವಂದೇ ಭಾರತ ರೈಲು ಸಂಚಾರ! ಇಲ್ಲಿದೆ ಸಂಪೂರ್ಣ ವಿವರ

    By adminSeptember 16, 2024No Comments2 Mins Read
    vandebharath

    ಬಹು ನಿರೀಕ್ಷಿತ ಹುಬ್ಬಳ್ಳಿ-ಪುಣೆ ವಂದೇ ಭಾರತ್​ ರೈಲಿಗೆ (Hubblli-Pune Vande Bharat) ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ (ಸೆ.16) ವರ್ಚುವಲ್​​ ಮೂಲಕ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ ಮಧ್ಯೆ ಸಂಚರಿಸುವ ವಂದೇ ಭಾರತ್​ ರೈಲು ಎರಡು ವಾಣಿಜ್ಯ ಮಹಾನಗರಗಳನ್ನು ಸಂಪರ್ಕಿಸುವ ಕೊಂಡಿಯಾಗಿದೆ. ಇದು ಕರ್ನಾಟಕದ 10ನೇ ವಂದೇ ಭಾರತ್ ರೈಲಾಗಿದೆ. ಹುಬ್ಬಳ್ಳಿ-ಪುಣೆ ವಂದೇ ಭಾರತ್​ ರೈಲು ಸಮಯ, ಯಾವ್ಯಾವ ದಿನದಂದು ಸಂಚರಿಸಲಿದೆ ಎಂಬ ಮಾಹಿತಿ ಇಲ್ಲಿದೆ.

    ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಕೇವಲ 8.5 ಗಂಟೆಗಳಲ್ಲಿ 557 ಕಿಮೀ ಕ್ರಮಿಸುತ್ತದೆ. ಇತರ ರೈಲುಗಳಿಗೆ ಹೋಲಿಸಿದರೆ ಸುಮಾರು 3 ಗಂಟೆಗಳ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಈ ರೈಲು ವಾರದಲ್ಲಿ ಮೂರು ದಿನ ಮಾತ್ರ ಸಂಚರಿಸುತ್ತದೆ.
    ಹುಬ್ಬಳ್ಳಿ ಜನರ ಬಹು ನಿರೀಕ್ಷಿತ ಪುಣೆ-ಹುಬ್ಬಳ್ಳಿ ವಂದೇ ಭಾರತ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ ಮಧ್ಯೆ ಸಂಚರಿಸುವ ವಂದೇ ಭಾರತ್​ ರೈಲು ಎರಡು ವಾಣಿಜ್ಯ ಮಹಾನಗರಗಳನ್ನು ಸಂಪರ್ಕಿಸುವ ಕೊಂಡಿಯಾಗಿದೆ.


    Provided by
    Provided by

    ಹುಬ್ಬಳ್ಳಿಯಿಂದ ಬುಧವಾರ, ಶುಕ್ರವಾರ ಮತ್ತು ಭಾನುವಾರ ಹೊರಟು ಅದೇ ದಿನ ಪುಣೆ ತಲುಪುತ್ತದೆ. ಪುಣೆಯಿಂದ ಗುರುವಾರ, ಶನಿವಾರ ಮತ್ತು ಸೋಮವಾರ ಹೊರಟು ಹುಬ್ಬಳ್ಳಿ ತಲಪುತ್ತದೆ. ಈ ರೈಲು ಒಟ್ಟು 8 ಬೋಗಿಗಳೊಂದಿಗೆ ಸಂಚರಿಸಲಿದ್ದು, 52 ಎಕ್ಸಿಕ್ಯೂಟಿವ್​ ಕ್ಲಾಸ್​ ಸೀಟ್​ಗಳು ಮತ್ತು 478 ಚೇರ್​ ಕಾರ್​​ ಸೀಟುಗಳು ಇರಲಿವೆ. ಒಟ್ಟು 530 ಆಸನಗಳನ್ನು ಹೊಂದಿದೆ.

    ಹುಬ್ಬಳ್ಳಿ-ಪುಣೆ ವಂದೇ ಭಾರತ್​ ರೈಲು ಧಾರವಾಡ, ಸತಾರಾ, ಸಾಂಗ್ಲಿ, ಮೀರಜ್ ನಿಲ್ದಾಣಗಳಲ್ಲಿ ನಿಲ್ಲುತ್ತದೆ. ವಂದೇ ಭಾರತ್ ಸ್ವದೇಶಿ ರೈಲಾಗಿದೆ. ‘ಮೇಕ್ ಇನ್ ಇಂಡಿಯಾ’ದ ಪ್ರತೀಕವಾಗಿದೆ. ಮೊದಲ ವಂದೇ ಭಾರತ್​ ರೈಲನ್ನು 2019ರ ಫೆಬ್ರವರಿ 15 ರಂದು ಉದ್ಘಾಟಿಸಲಾಗಿತ್ತು.

    ರೈಲು ಸಂಖ್ಯೆ 20669: ಎಸ್‌ಎಸ್‌ಎಸ್ ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸೆಪ್ಟೆಂಬರ್​​​ 18 ರಿಂದ ಜಾರಿಗೆ ಬರುವಂತೆ ಪ್ರತಿ (ಬುಧವಾರ, ಶುಕ್ರವಾರ ಮತ್ತು ಭಾನುವಾರ) ಹುಬ್ಬಳ್ಳಿಯಿಂದ 05.00 ಗಂಟೆಗೆ ಹೊರಟು ಅದೇ ದಿನ ಮಧ್ಯಾಹ್ನ 1.30ಕ್ಕೆ ಪುಣೆ ತಲುಪುತ್ತದೆ.

    ರೈಲು ಸಂಖ್ಯೆ 20670: ಪುಣೆ-ಎಸ್‌ಎಸ್‌ಎಸ್ ಹುಬ್ಬಳ್ಳಿ ವಂದೇ ಭಾರತ್ ರೈಲು ಸೆಪ್ಟೆಂಬರ್​ 19 ರಿಂದ ಜಾರಿಗೆ ಬರುವಂತೆ ಪ್ರತಿ (ಗುರುವಾರ, ಶನಿವಾರ ಮತ್ತು ಸೋಮವಾರ) ಪುಣೆಯಿಂದ ಮಧ್ಯಾಹ್ನ 2.15ಕ್ಕೆ ಹೊರಟು ಅದೇ ದಿನ ರಾತ್ರಿ 10.45ಕ್ಕೆ ಹುಬ್ಬಳ್ಳಿ ತಲುಪಲಿದೆ. ಇಂದು (ಸೆ.16) 4.15ಕ್ಕೆ ಪುಣೆಯಿಂದ ಹೊರಟು ರಾತ್ರಿ 11.40ಕ್ಕೆ ಹುಬ್ಬಳ್ಳಿ ತಲುಪುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.