ಶ್ರೀನಗರ: ಜಮ್ಮು ಕಾಶ್ಮೀರದ ಅಖ್ನೂರ್‌ನ ಸುಂದರ್ ಬನಿ ಸೆಕ್ಟರ್‌ನಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಹೆಮ್ಮೆಯ ಶ್ವಾನ ‘ಫ್ಯಾಂಟಮ್’ ಸೋಮವಾರ ವೀರ ಮರಣವನ್ನಪ್ಪಿದೆ.
ಸೋಮವಾರ ಬೆಳಿಗ್ಗೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸೇನಾ ಪಡೆಯ ಶ್ವಾನ ‘ಫ್ಯಾಂಟಮ್’ ಗೆ ಗಂಭೀರ ಗಾಯವಾಗಿತ್ತು ಕೂಡಲೇ ಶ್ವಾನಕ್ಕೆ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಫ್ಯಾಂಟಮ್ ಬೆಲ್ಜಿಯನ್ ಮಾಲಿನೋಯಿಸ್ ತಳಿಗೆ ಸೇರಿದ ಶ್ವಾನವಾಗಿದ್ದು, 2020ರ ಮೇ ತಿಂಗಳಲ್ಲಿ ಜನಿಸಿತ್ತು. ಬಳಿಕ 2022ರಲ್ಲಿ ಸೇನೆಗೆ ಸೇರ್ಪಡೆಗೊಂಡಿತ್ತು ಅಲ್ಲದೆ ಶ್ವಾನ K9 ಘಟಕದ ಭಾಗವಾಗಿತ್ತು, ಭಯೋತ್ಪಾದನೆ–ವಿರೋಧಿ ಕಾರ್ಯಾಚರಣೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿತ್ತು. ಅಗಲಿದ ಶ್ವಾನಕ್ಕೆ ಸೇನೆಯ ವೈಟ್ ನೈಟ್ ಕಾರ್ಪ್ಸ್ ವಂದನೆ ಸಲ್ಲಿಸಿ ಗೌರವ ಸಲ್ಲಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q