ನ್ಯೂಯಾರ್ಕ್ ನಗರದಲ್ಲಿ ನಡೆದ ಬೈಕ್ ಅಪಘಾತವೊಂದರಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ದ ಸ್ಟೇಟ್ ಯುನಿವರ್ಸಿಟಿ ಆಫ್ ನ್ಯೂಯಾರ್ಕ್ ನಲ್ಲಿ ಅಧ್ಯಯನ ಮಾಡುತ್ತಿದ್ದ ಆಂಧ್ರ ಪ್ರದೇಶದ ಶ್ರೀ ಬೆಲೆಮ್ ಅಚ್ಯುತ್ ಬುಧವಾರ ಸಂಜೆ ನಡೆದ ದುರಂತದಲ್ಲಿ ಅಸು ನೀಗಿರುವುದಾಗಿ ಪೊಲೀಸರು ಹೇಳಿದ್ದಾರೆ.
“ನಿನ್ನೆ ಸಂಜೆ ನಡೆದ ಬೈಕ್ ದುರಂತದಲ್ಲಿ ಎಸ್ ಯು ಎನ್ ವೈ ವಿದ್ಯಾರ್ಥಿ ಶ್ರೀ ಬೆಲೆಮ್ ಅಚ್ಯುತ ಮೃತಪಟ್ಟಿದ್ದಾರೆ ಎಂದು ತಿಳಿದು ಅತೀವ ದುಃಖವಾಗಿದೆ” ಎಂದು ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ಎಕ್ಸ್ ಪೋಸ್ಟ್ ನಲ್ಲಿ ಕಂಬನಿ ಮಿಡಿದಿದ್ದಾರೆ.
ಸಂತ್ರಸ್ತ ಕುಟಂಬ ಹಾಗೂ ಸ್ಥಳೀಯ ಏಜೆನ್ಸಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು, ಪಾರ್ಥಿವ ಶರೀರವನ್ನು ಭಾರತಕ್ಕೆ ವಾಪಾಸು ಕಳುಹಿಸುವುದು ಸೇರಿದಂತೆ ಕುಟುಂಬಕ್ಕೆ ಎಲ್ಲ ಅಗತ್ಯ ನೆರವು ನೀಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA