ಭಾರತೀಯ ಮೂಲದ 23 ವರ್ಷದ ತೆಲುಗು ವಿದ್ಯಾರ್ಥಿನಿಯೊಬ್ಬರು ಇತ್ತೀಚೆಗೆ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಹೈದರಾಬಾದ್ ಮೂಲದ ಮತ್ತು ಸ್ಯಾನ್ ಬರ್ನಾರ್ಡಿನೊದ ಕ್ಯಾಲಿಫೋರ್ನಿಯಾ ಸ್ಟೇಟ್ ಯೂನಿವರ್ಸಿಟಿಯಲ್ಲಿ ಅಧ್ಯಯನ ಮಾಡುತ್ತಿರುವ ನಿತಿಶಾ ಕಂದುಲಾ ಮೇ 28 ರಿಂದ ನಾಪತ್ತೆಯಾಗಿದ್ದಾರೆ.
ನಿತೀಶಾ ಅವರು ಕೊನೆಯ ಬಾರಿಗೆ ಲಾಸ್ ಏಂಜಲೀಸ್ ನಲ್ಲಿ ಕಾಣಿಸಿಕೊಂಡಿದ್ದರು ಎಂದು ವಿಶ್ವವಿದ್ಯಾಲಯವು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಸ್ಥಳೀಯ ಪೊಲೀಸರು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದು, ವಿದ್ಯಾರ್ಥಿನಿಯ ಪತ್ತೆಗಾಗಿ ಸಾರ್ವಜನಿಕರಿಂದ ಸಹಾಯ ಕೋರಿದ್ದಾರೆ.
ತೆಲಂಗಾಣ ಮೂಲದ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಒಂದು ತಿಂಗಳೊಳಗೆ ಇಂಥ ಮತ್ತೊಂದು ಘಟನೆ ನಡೆದಿರುವುದು ಕಳವಳ ಮೂಡಿಸಿದೆ. ತೆಲಂಗಾಣ ಮೂಲದ ರೂಪೇಶ್ ಚಂದ್ರ ಚಿಂತಾಕಿಂಡಿ ಕಳೆದ ತಿಂಗಳು ಚಿಕಾಗೋದಲ್ಲಿ ನಾಪತ್ತೆಯಾಗಿದ್ದರು. ಈ ವಿದ್ಯಾರ್ಥಿ ಬಗ್ಗೆ ಈವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


